Headlines

ಕೆಎಸ್‌ಆರ್‌ಟಿಸಿ ಬಸ್‌–ಬೈಕ್ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಸಾವು

A 46-year-old bike rider, Keerthi Nayak, died on the spot after a head-on collision between a KSRTC bus and a TVS Victor bike near Holaluru in Shivamogga taluk. Police have registered a case

ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಬೈಕ್‌ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಶಿವಮೊಗ್ಗ ತಾಲೂಕಿನ ಹೊಳಲೂರು ಸಮೀಪ ನಡೆದಿದೆ.

ಮೃತರನ್ನು ಕೀರ್ತಿ ನಾಯ್ಕ್ (46) ಎಂದು ಗುರುತಿಸಲಾಗಿದೆ.

ನಿನ್ನೆ ರಾತ್ರಿ ಸುಮಾರು 9:30ರ ವೇಳೆ ಶಿವಮೊಗ್ಗದಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಸರ್ಕಾರಿ ಬಸ್‌ಗೆ ಹೊಳಲೂರು ಮತ್ತು ಸೂಗೂರು ಮಧ್ಯೆ ಎದುರಿನಿಂದ ಬರುತ್ತಿದ್ದ ಟಿವಿಎಸ್ ಬೈಕ್ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿ, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿದ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ.

About The Author

Exit mobile version