A 53-year-old woman from Kundapura drowned in the Varahi River near Bhagamane, close to Hosangadi, while on a trekking trip with friends. Police have registered a case and are investigating the incident.
ಹೊಸಂಗಡಿ ಸಮೀಪದ ಭಾಗಿಮನೆ ಬಳಿ ವಾರಾಹಿ ನದಿಯ ನೀರಿನಲ್ಲಿ ಮುಳುಗಿ ಕುಂದಾಪುರ ಮೂಲದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಭಾನುವಾರ ವರದಿಯಾಗಿದೆ.
ದುರಂತದಲ್ಲಿ ಮೃತಪಟ್ಟವರನ್ನು ಕುಂದಾಪುರ ನಗರದ ಮಯೂರ ಮೆಡಿಕಲ್ ಮಾಲೀಕೆಯಾಗಿರುವ ಶುಭಶ್ರೀ (53) ಎಂದು ಗುರುತಿಸಲಾಗಿದೆ.
ಅವರು ತಮ್ಮ ಜಿಮ್ ಕ್ಲಬ್‌ನ ಗೆಳತಿಯರೊಂದಿಗೆ ಭಾನುವಾರ ಬೆಳಿಗ್ಗೆ ತಾಲ್ಲೂಕಿನ ಹೊಸಂಗಡಿ ಸಮೀಪದ ಮೆಟ್ಕಲ್‌ಗುಡ್ಡಕ್ಕೆ ಟ್ರೆಕ್ಕಿಂಗ್‌ಗೆ ತೆರಳಿದ್ದರು ಎನ್ನಲಾಗಿದೆ.
ಟ್ರೆಕ್ಕಿಂಗ್ ಮುಗಿಸಿ ಭಾಗಿಮನೆ ಎಂಬಲ್ಲಿ ವಾರಾಹಿ ನದಿ ಅಂಚಿನ ಕಲ್ಲುಬಂಡೆಯ ಮೇಲೆ ಕುಳಿತಿದ್ದ ವೇಳೆ, ಆಕಸ್ಮಿಕವಾಗಿ ಹೆಚ್ಚಿದ ನೀರಿನ ಹರಿವಿನಿಂದ ಆಯತಪ್ಪಿ ನದಿಗೆ ಬಿದ್ದಿದ್ದಾರೆ. ಪರಿಣಾಮವಾಗಿ ಅವರು ನೀರಿನಲ್ಲಿ ಮುಳುಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮೃತ ಶುಭಶ್ರೀ ಅವರು ನಗರದ ಚಿಕನ್ ಸಾಲ್ ರಸ್ತೆಯ ನಿವಾಸಿಯಾಗಿದ್ದು, ಓರ್ವ ಪುತ್ರನನ್ನು ಅಗಲಿದ್ದಾರೆ.
ಘಟನೆ ಸಂಬಂಧ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರೆದಿದೆ.
ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…
ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…
ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ಮಾನವೀಯತೆಯೆಂಬುದು ಕೇವಲ…
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…
ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…
ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…