ಶಿಕಾರಿಪುರದಲ್ಲಿ ಚಿರತೆ ದಾಳಿ: ಇಬ್ಬರಿಗೆ ಗಂಭೀರ ಗಾಯ, ಗ್ರಾಮಸ್ಥರಲ್ಲಿ ಆತಂಕ

Leopard attack in Shikaripura taluk of Shivamogga injures two farmers seriously, triggering panic among villagers. Forest officials set traps and urge caution.

ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ ಹಾಗೂ ಮುತ್ತಗಿ ಗ್ರಾಮಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ ನಡೆಸಿದ ಘಟನೆ ಆತಂಕ ಸೃಷ್ಟಿಸಿದೆ. ದಾಳಿಯಲ್ಲಿ ಇಬ್ಬರು ರೈತರು ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಡಗಂಟಿ ಗ್ರಾಮದ ಸುದೀಪ್ ಅವರು ಸಂಜೆ ವೇಳೆ ಮುತ್ತಗಿ ಗ್ರಾಮದ ಸಮೀಪದ ಮೆಕ್ಕೆಜೋಳದ ಜಮೀನಿಗೆ ಮೇವು ತರಲು ತೆರಳಿದ್ದಾಗ ಚಿರತೆ ಏಕಾಏಕಿ ದಾಳಿ ನಡೆಸಿದೆ. ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನೊಂದೆಡೆ, ತಡಸನಹಳ್ಳಿ ಗ್ರಾಮದ ಮುತ್ತಣ್ಣ ಅವರು ಶನಿವಾರ ಬೆಳಿಗ್ಗೆ ಗದ್ದೆಗೆ ನೀರು ಬಿಡಲು ತೆರಳಿದ್ದ ವೇಳೆ ಚಿರತೆ ದಾಳಿ ನಡೆಸಿದೆ. ಗಾಯಗೊಂಡ ಮುತ್ತಣ್ಣ ಅವರನ್ನು ಕೂಡ ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದಲ್ಲದೆ, ಶನಿವಾರ ಸಂಜೆ ತಡಸನಹಳ್ಳಿ–ಅಡಗಂಟಿ ಗ್ರಾಮದ ನಡುವಿನ ಮುಖ್ಯ ರಸ್ತೆಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ಹೂವ್ಯನಾಯ್ಕ ಅವರ ಮೇಲೂ ಚಿರತೆ ದಾಳಿ ಮಾಡಲು ಯತ್ನಿಸಿದೆ. ಅವರು ಪ್ರಥಮ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ.

ಘಟನೆ ಹಿನ್ನೆಲೆ ತಡಸನಹಳ್ಳಿ, ಅಡಗಂಟಿ ಗ್ರಾಮಗಳ ಜಮೀನು ಪ್ರದೇಶ ಹಾಗೂ ಮುತ್ತಗಿ ಕಿರು ಅರಣ್ಯದಲ್ಲಿ ಮೂರು ಕಡೆ ಬೋನುಗಳನ್ನು ಅಳವಡಿಸಲಾಗಿದೆ. ಸಾಮಾನ್ಯವಾಗಿ ಚಿರತೆಗಳು ಮನುಷ್ಯರ ಮೇಲೆ ದಾಳಿ ಮಾಡುವುದಿಲ್ಲ. ಆದರೆ ಇದು ಅಸ್ವಸ್ಥವಾಗಿರಬಹುದು ಅಥವಾ ಅರಣ್ಯದಿಂದ ವಿಚಲಿತಗೊಂಡಿರುವ ಸಾಧ್ಯತೆ ಇದೆ ಎಂದು ವಲಯ ಅರಣ್ಯಾಧಿಕಾರಿ ಜಾವಿದ್ ಅಂಗಡಿ ತಿಳಿಸಿದ್ದಾರೆ.

ಚಿರತೆ ದಾಳಿಯಿಂದಾಗಿ ಗ್ರಾಮಸ್ಥರಲ್ಲಿ ಭೀತಿ ವಾತಾವರಣ ನಿರ್ಮಾಣವಾಗಿದ್ದು, ರೈತರು ಜಮೀನಿಗೆ ತೆರಳಲು ಹೆದರುತ್ತಿದ್ದಾರೆ. ತಕ್ಷಣ ಚಿರತೆ ಸೆರೆ ಹಿಡಿಯುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ರೈತರು ಜಮೀನಿಗೆ ತೆರಳುವ ವೇಳೆ ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಅರಣ್ಯ ಇಲಾಖೆ ಸೂಚನೆ ನೀಡಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…

3 hours ago

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…

4 hours ago

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…

5 hours ago

ಈದ್ ಮಿಲಾದ್ – ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್ ವಾರ್ನಿಂಗ್

ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…

6 hours ago

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…

13 hours ago

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…

13 hours ago