Headlines

ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವು

ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವು

A MESCOM lineman died due to electric shock while repairing a power line in Shikaripura. The incident occurred near KEB station, leaving the community in shock.

ವಿದ್ಯುತ್ ಲೈನ್ ದುರಸ್ತಿ ಕಾರ್ಯ ವೇಳೆ ಸಂಭವಿಸಿದ ಆಕಸ್ಮಿಕ ವಿದ್ಯುತ್ ಶಾಕ್‌ನಿಂದ ಮೆಸ್ಕಾಂ ಲೈನ್‌ಮ್ಯಾನ್ ಒಬ್ಬರು ಸಾವನ್ನಪ್ಪಿದ ದಾರುಣ ಘಟನೆ ಶಿಕಾರಿಪುರ ಪಟ್ಟಣದಲ್ಲಿ ನಡೆದಿದೆ.

ಮೃತರನ್ನು ಹರೀಶ್ (45) ಎಂದು ಗುರುತಿಸಲಾಗಿದೆ. ಅವರು ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ ಎಂದು ತಿಳಿದುಬಂದಿದೆ.

ಶಿಕಾರಿಪುರ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ಕೆಇಬಿ ಸ್ಟೇಷನ್ ಎದುರು ವಿದ್ಯುತ್ ಲೈನ್ ದುರಸ್ತಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ವಿದ್ಯುತ್ ಪ್ರವಹಿಸಿದ್ದು, ತೀವ್ರ ಶಾಕ್‌ಗೆ ಒಳಗಾದ ಹರೀಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹರೀಶ್ ಅವರು ಈ ಮೊದಲು ಧರ್ಮಸ್ಥಳ ಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಸುಮಾರು ಮೂರು ತಿಂಗಳ ಹಿಂದೆ ಶಿಕಾರಿಪುರಕ್ಕೆ ವರ್ಗಾವಣೆಗೊಂಡಿದ್ದರು ಎನ್ನಲಾಗಿದೆ.

About The Author