A MESCOM lineman died due to electric shock while repairing a power line in Shikaripura. The incident occurred near KEB station, leaving the community in shock.
ವಿದ್ಯುತ್ ಲೈನ್ ದುರಸ್ತಿ ಕಾರ್ಯ ವೇಳೆ ಸಂಭವಿಸಿದ ಆಕಸ್ಮಿಕ ವಿದ್ಯುತ್ ಶಾಕ್ನಿಂದ ಮೆಸ್ಕಾಂ ಲೈನ್ಮ್ಯಾನ್ ಒಬ್ಬರು ಸಾವನ್ನಪ್ಪಿದ ದಾರುಣ ಘಟನೆ ಶಿಕಾರಿಪುರ ಪಟ್ಟಣದಲ್ಲಿ ನಡೆದಿದೆ.
ಮೃತರನ್ನು ಹರೀಶ್ (45) ಎಂದು ಗುರುತಿಸಲಾಗಿದೆ. ಅವರು ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ ಎಂದು ತಿಳಿದುಬಂದಿದೆ.
ಶಿಕಾರಿಪುರ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ಕೆಇಬಿ ಸ್ಟೇಷನ್ ಎದುರು ವಿದ್ಯುತ್ ಲೈನ್ ದುರಸ್ತಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ವಿದ್ಯುತ್ ಪ್ರವಹಿಸಿದ್ದು, ತೀವ್ರ ಶಾಕ್ಗೆ ಒಳಗಾದ ಹರೀಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹರೀಶ್ ಅವರು ಈ ಮೊದಲು ಧರ್ಮಸ್ಥಳ ಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಸುಮಾರು ಮೂರು ತಿಂಗಳ ಹಿಂದೆ ಶಿಕಾರಿಪುರಕ್ಕೆ ವರ್ಗಾವಣೆಗೊಂಡಿದ್ದರು ಎನ್ನಲಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್