Mahesh D of RBD Group honored with the prestigious Narayana Ratna Award at a state-level cricket tournament in Garthikere for his contributions to business innovation, employment generation, and social service.
ಸಾಗರ: ಉದ್ಯಮಿ, ದಾನಶೀಲರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ಆರ್.ಬಿ.ಡಿ. ಗ್ರೂಪ್ನ ಮಹೇಶ್ ಡಿ. ಅವರಿಗೆ ಪ್ರತಿಷ್ಠಿತ ‘ನಾರಾಯಣ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ನಿಟ್ಟೂರು ಬ್ರಹ್ಮಶ್ರೀ ನಾರಾಯಣಗುರು ಮಹಾಸಂಸ್ಥಾನ ಪೀಠದ ಆಶ್ರಯದಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆಯಲ್ಲಿ ನಡೆದ ರಾಜ್ಯಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿಯ ಸಂದರ್ಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಉದ್ಯಮ ಕ್ಷೇತ್ರದಲ್ಲಿ ನವೀನ ಆವಿಷ್ಕಾರಗಳನ್ನು ಕೈಗೊಂಡು, ಉದ್ಯೋಗಾವಕಾಶಗಳನ್ನು ಸೃಷ್ಟಿಸುವಲ್ಲಿ ಮಹೇಶ್ ಡಿ. ಅವರು ಪ್ರಮುಖ ಪಾತ್ರವಹಿಸಿದ್ದಾರೆ. ನೂರಾರು ಯುವಕರಿಗೆ ತಮ್ಮ ವಿವಿಧ ಸಂಸ್ಥೆಗಳ ಮೂಲಕ ಉದ್ಯೋಗ ಕಲ್ಪಿಸುವುದರ ಜೊತೆಗೆ, ಸಹಕಾರಿ ಸಂಸ್ಥೆಯನ್ನು ಪ್ರಾರಂಭಿಸಿ ಆರ್ಥಿಕ ಕ್ಷೇತ್ರದಲ್ಲೂ ಗಮನಾರ್ಹ ಹೆಜ್ಜೆ ಇಟ್ಟಿದ್ದಾರೆ.
ಇದೇ ವೇಳೆ, ಅನೇಕ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆರ್ಥಿಕ ನೆರವು ನೀಡುವ ಮೂಲಕ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿರುವುದನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದು ಸಂಸ್ಥಾನ ಪೀಠದ ಮೂಲಗಳು ತಿಳಿಸಿವೆ.
ಸಾಗರ, ಹೊಸನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆರ್.ಬಿ.ಡಿ. ಗ್ರೂಪ್ನ ಉದ್ಯಮ ವಿಸ್ತರಣೆಯಲ್ಲಿ ಮಹೇಶ್ ಡಿ. ಅವರು ಸಕ್ರಿಯವಾಗಿ ಪಾಲ್ಗೊಂಡಿದ್ದು, ಸಮಾಜಮುಖಿ ಚಟುವಟಿಕೆಗಳ ಮೂಲಕ ವಿಶಿಷ್ಟ ಗುರುತನ್ನು ಪಡೆದಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್