Over 200 arecanut trees were destroyed in a fire at Kusugundi village near Ripponpet, allegedly due to MESCOM negligence after a tree leaning on an electric pole caused a short circuit.
ರಿಪ್ಪನ್‌ಪೇಟೆ : ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯದಿಂದಾಗಿ ರೈತನ ಅಡಿಕೆ ತೋಟಕ್ಕೆ ಬೆಂಕಿ ತಗುಲಿ 200ಕ್ಕೂ ಹೆಚ್ಚು ಅಡಿಕೆ ಮರಗಳು ಸುಟ್ಟುಹೋಗಿರುವ ಘಟನೆ ರಿಪ್ಪನ್‌ಪೇಟೆ ಸಮೀಪದ ಕೋಡೂರು ಗ್ರಾಪಂ ವ್ಯಾಪ್ತಿಯ ಕುಸುಗುಂಡಿ ಗ್ರಾಮದಲ್ಲಿ ನಡೆದಿದೆ.
ಕುಸುಗುಂಡಿ ಗ್ರಾಮದ ಸರ್ವೆ ನಂ. 26ರಲ್ಲಿ ಇರುವ ಚಂದ್ರಶೇಖರ್ ಆಚಾರ್ ಅವರಿಗೆ ಸೇರಿದ ಅಡಿಕೆ ತೋಟದಲ್ಲಿ ಈ ದುರ್ಘಟನೆ ಸಂಭವಿಸಿದೆ. ಸುಮಾರು ಎಂಟು ವರ್ಷ ಪ್ರಾಯದ ಇನ್ನೂರಕ್ಕೂ ಹೆಚ್ಚು ಅಡಿಕೆ ಮರಗಳು ಬೆಂಕಿಗಾಹುತಿಯಾಗಿ ರೈತನಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ.
ಚಂದ್ರಶೇಖರ್ ಅವರ ತೋಟದಲ್ಲಿರುವ ವಿದ್ಯುತ್ ಕಂಬಕ್ಕೆ ಕೆಲವು ದಿನಗಳ ಹಿಂದೆ ಮರವೊಂದು ತಾಗಿ ವಾಲಿಕೊಂಡಿತ್ತು. ಈ ಬಗ್ಗೆ ಮೆಸ್ಕಾಂ ಇಲಾಖೆಯ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಲಾಗಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಇದರಿಂದಾಗಿ ಆ ಮರ ವಿದ್ಯುತ್ ತಂತಿಗೆ ತಾಗಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ತೋಟದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಅಡಿಕೆ ಮರಗಳಿಗೆ ಬೆಂಕಿ ವ್ಯಾಪಿಸಿದೆ ಎನ್ನಲಾಗಿದೆ. ಪರಿಣಾಮವಾಗಿ ಬಡ ರೈತನ ಅಡಿಕೆ ತೋಟ ಸಂಪೂರ್ಣವಾಗಿ ಹಾನಿಗೊಳಗಾಗಿದೆ.
ಘಟನೆಯ ವಿಷಯ ತಿಳಿಯುತ್ತಿದ್ದಂತೆ ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ರೈತನಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದ ಅವರು, ಮೆಸ್ಕಾಂ ಇಲಾಖೆಯಿಂದ ಸೂಕ್ತ ಪರಿಹಾರ ದೊರಕುವಂತೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಸ್ಥಳೀಯರು ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ರೈತನಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…