ಮಾರುತಿಪುರ ಸಮೀಪ ಹಾಲಿನ ಕಂಟೇನರ್‌ ಟ್ರಕ್‌ ಪಲ್ಟಿ – ರಸ್ತೆ ಮೇಲೆ ಹೊಳೆಯಂತೆ ಹರಿದ ಹಾಲು

A milk tanker truck carrying 20,000 liters of milk overturned near Mavinahole close to Marutipura on the Ranebennur–Byndoor National Highway. The container broke open and milk spilled onto the road like a stream. The driver escaped with minor injuries.

ಹೊಸನಗರ : ಹಾಲು ಸಾಗಿಸುತ್ತಿದ್ದ ಟ್ರಕ್‌ ಪಲ್ಟಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಮಾರುತಿಪುರ ಸಮೀಪದ ಮಾವಿನಹೊಳೆ ಪ್ರದೇಶದಲ್ಲಿ ಸಂಭವಿಸಿದೆ.

ಶಿವಮೊಗ್ಗದ ಕಡೆಯಿಂದ ಕಾಸರಗೋಡಿನತ್ತ ತೆರಳುತ್ತಿದ್ದ ಹಾಲಿನ ಕಂಟೇನರ್‌ ಲಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಅಪಘಾತದ ವೇಳೆ ಟ್ರಕ್‌ ಭಾರೀ ವೇಗದಲ್ಲಿದ್ದ ಕಾರಣ ಅದರ ಮೇಲಿದ್ದ ಸುಮಾರು 20 ಸಾವಿರ ಲೀಟರ್‌ ಸಾಮರ್ಥ್ಯದ ಹಾಲಿನ ಕಂಟೇನರ್‌ ಜೋರಾಗಿ ನೆಲಕ್ಕೆ ಬಿದ್ದಿದೆ. ಪಲ್ಟಿಯಾದ ರಭಸಕ್ಕೆ ಕಂಟೇನರ್‌ ಒಡೆದು ಹಾಲು ರಸ್ತೆಯ ಮೇಲೆಯೇ ಹೊಳೆಯಂತೆ ಹರಿದ ದೃಶ್ಯ ಕಂಡುಬಂದಿತು.

ಅಪಘಾತದ ನಂತರ ಕೆಲವು ಸಮಯ ರಸ್ತೆ ಮೇಲೆ ಹಾಲು ಹರಿದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿಚಿತ್ರ ದೃಶ್ಯ ನಿರ್ಮಾಣವಾಯಿತು. ಅಪಘಾತದಲ್ಲಿ ಟ್ರಕ್‌ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್‌ ದೊಡ್ಡ ಅನಾಹುತ ತಪ್ಪಿದೆ. ಚಾಲಕನನ್ನು ಸ್ಥಳೀಯರು ಪ್ರಾಥಮಿಕ ಚಿಕಿತ್ಸೆಗೆ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದ ಪರಿಣಾಮ ಕೆಲಕಾಲ ರಸ್ತೆ ಸಂಚಾರಕ್ಕೂ ಅಡಚಣೆ ಉಂಟಾಯಿತು. ಬಳಿಕ ಸ್ಥಳೀಯರು ಹಾಗೂ ಪೊಲೀಸರು ಸೇರಿ ಲಾರಿಯನ್ನು ತೆರವುಗೊಳಿಸುವ ಕಾರ್ಯ ಕೈಗೊಂಡರು.

ತಿರುವು ಪ್ರದೇಶದಲ್ಲಿ ವೇಗ ನಿಯಂತ್ರಣ ಇಲ್ಲದಿರುವುದು ಮತ್ತು ರಸ್ತೆ ಪರಿಸ್ಥಿತಿ ಕಾರಣವಾಗಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ಈ ಸಂಬಂಧ ಹೊಸನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಮಸ್ಕಾರ, ನಾನು ರಫಿ ರಿಪ್ಪನ್‌ಪೇಟೆ. ​'ಪೋಸ್ಟ್‌ಮ್ಯಾನ್ ನ್ಯೂಸ್' ಮಾಧ್ಯಮದ ಹಿಂದಿರುವ ಓರ್ವ ಅಪ್ಪಟ ಸುದ್ದಿಪ್ರೇಮಿ ಹಾಗೂ ಪತ್ರಕರ್ತ. "ನಮ್ಮೂರ ಸುದ್ದಿಗಳು ಜಗತ್ತಿಗೆ ತಲುಪಬೇಕು" ಎಂಬ ಆರು ವರ್ಷಗಳ ಕನಸಿನ ಕೂಸೇ ಈ ನಮ್ಮ ಪೋಸ್ಟ್‌ಮ್ಯಾನ್ ನ್ಯೂಸ್. ​ಸ್ಥಳೀಯ ಪತ್ರಿಕೆಗಳಿಂದ ಹಿಡಿದು ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೂ ಮಾಧ್ಯಮದ ನಾನಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದು. ಆದರೆ, ಈ ಪಯಣದಲ್ಲಿ ನನಗೊಂದು ಕೊರತೆ ಸದಾ ಕಾಡುತ್ತಿತ್ತು; ಅದೇನೆಂದರೆ, 'ನಿಜವಾದ ಸ್ಥಳೀಯ ಧ್ವನಿಗೆ ಅಲ್ಲಿ ಸೂಕ್ತ ವೇದಿಕೆ ಇರಲಿಲ್ಲ'. ಆ ಶೂನ್ಯವನ್ನು ತುಂಬಲು ಹುಟ್ಟಿಕೊಂಡ ಪರ್ಯಾಯ ವೇದಿಕೆಯೇ “ಪೋಸ್ಟ್‌ಮ್ಯಾನ್ ನ್ಯೂಸ್.” ​ಇಲ್ಲಿ 'ಸುದ್ದಿ' ಎಂದರೆ ಕೇವಲ ಸುದ್ದಿ ಮಾತ್ರ. ಇದು ಯಾವ ವ್ಯಕ್ತಿ ಅಥವಾ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಅತ್ಯಂತ ಸ್ಪಷ್ಟ: "ಸುದ್ದಿಯನ್ನು ಪ್ರಾಮಾಣಿಕವಾಗಿ ಹೇಳಬೇಕು, ತೀರ್ಪು ಕೊಡುವ ಕೆಲಸ ನಮಗಲ್ಲ." ಕೆಲವೊಮ್ಮೆ ನಮ್ಮ ವರದಿಗಳಿಗೆ ಬರುವ ಪ್ರತಿಕ್ರಿಯೆಗಳು ಬೇರೆಯದೇ ಬಣ್ಣ ಪಡೆಯಬಹುದು, ಆದರೆ ಅದಕ್ಕೆ ನನ್ನ ಏಕೈಕ ಉತ್ತರ ಕೇವಲ ನನ್ನ ಕೆಲಸದ ಮೂಲಕ ಮಾತ್ರ. ​'ಪೋಸ್ಟ್‌ಮ್ಯಾನ್ ನ್ಯೂಸ್' ಇಂದು ಕೇವಲ ಒಂದು ಸುದ್ದಿ ಪುಟವಾಗಿ ಉಳಿದಿಲ್ಲ, ಅದೊಂದು ಜಾಗೃತಿಯ ಚಳವಳಿಯಾಗಿ ರೂಪುಗೊಳ್ಳುತ್ತಿದೆ. ಕೇವಲ ವರದಿ ಮಾಡುವುದಷ್ಟೇ ನಮ್ಮ ಉದ್ದೇಶವಲ್ಲ; ನಮ್ಮೂರಿನ ಘಟನೆಗಳು, ಎಲೆಮರೆಯ ಕಾಯಿಯಂತಿರುವ ಪ್ರತಿಭೆಗಳು, ಜ್ವಲಂತ ಸಮಸ್ಯೆಗಳು ಮತ್ತು ಸಾಧನೆಗಳನ್ನು ಹೊರಲೋಕಕ್ಕೆ ಪರಿಚಯಿಸುವ 'ಸೇತುವೆ'ಯಾಗಬೇಕೆಂಬುದು ನಮ್ಮ ಹೆಬ್ಬಯಕೆ. ಹಣ ಪಡೆದು, ಕಾಸಿಗಾಗಿ ಸುದ್ದಿ ಮಾಡುವ ಅಭ್ಯಾಸವೂ ನಮಗಿಲ್ಲ, ಆ ಹವ್ಯಾಸವೂ ನಮಗಿಲ್ಲ. ಸತ್ಯ ಮತ್ತು ನೈಜತೆಯೇ ನಮ್ಮ ಬಂಡವಾಳ. ​ನಮ್ಮ ಅಂತಿಮ ಗುರಿ ಒಂದೇ — "ಸಣ್ಣ ಊರುಗಳ ಸತ್ಯ ಕಥೆಗಳು, ಅತಿ ದೊಡ್ಡ ಮಟ್ಟದಲ್ಲಿ ಜಗತ್ತಿನ ಕಿವಿಗೆ ತಲುಪಬೇಕು." ​ತಮ್ಮ ಪ್ರೀತಿ ಮತ್ತು ಬೆಂಬಲ ಸದಾ ಹೀಗೆಯೇ ಇರಲಿ. ​ಸ್ನೇಹಪೂರ್ವಕವಾಗಿ, ರಫಿ ರಿಪ್ಪನ್‌ಪೇಟೆ ಸಂಪಾದಕರು, ಪೋಸ್ಟ್‌ಮ್ಯಾನ್ ನ್ಯೂಸ್ 🌐 [www.postmannewskannada.com]

Recent Posts

ಅತಿ ವೇಗದ ಬೈಕ್ ಚಾಲನೆಯಿಂದ ಪಾದಚಾರಿ ಸಾವು : ಬೈಕ್ ಸವಾರನಿಗೆ 1 ವರ್ಷಕ್ಕೂ ಹೆಚ್ಚು ಜೈಲು ಶಿಕ್ಷೆ

ಅತಿ ವೇಗದ ಬೈಕ್ ಚಾಲನೆಯಿಂದ ಪಾದಚಾರಿ ಸಾವು : ಬೈಕ್ ಸವಾರನಿಗೆ 1 ವರ್ಷಕ್ಕೂ ಹೆಚ್ಚು ಜೈಲು ಶಿಕ್ಷೆ Bhadravati…

12 hours ago

ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಗೆ ಸಾವಿರಾರು ಅಭ್ಯರ್ಥಿಗಳು –  ವಸತಿ ಕೊರತೆಯಿಂದ ಬಸ್ ನಿಲ್ದಾಣದಲ್ಲೇ ವಿಶ್ರಾಂತಿ

ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಗೆ ಸಾವಿರಾರು ಅಭ್ಯರ್ಥಿಗಳು –  ವಸತಿ ಕೊರತೆಯಿಂದ ಬಸ್ ನಿಲ್ದಾಣದಲ್ಲೇ ವಿಶ್ರಾಂತಿ KSRP Police Constable written…

12 hours ago

ಜಿಂಕೆ ಮಾಂಸ ದಾಸ್ತಾನು ಆರೋಪ: ಇಬ್ಬರ ಬಂಧನ

ಜಿಂಕೆ ಮಾಂಸ ದಾಸ್ತಾನು ಆರೋಪ: ಇಬ್ಬರ ಬಂಧನ Forest officials in Shivamogga taluk arrested two persons for…

12 hours ago

ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ. ಶಿವಕುಮಾರ್ ನೀಡಿದ ಭರವಸೆಗಳೇನು?

ಮಲೆನಾಡಿನ ರೈತರ ಜಮೀನಿಗೆ ಕೈಹಾಕಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ.…

2 days ago

ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ

ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ Vishwakarma Jayanti was celebrated by the…

2 days ago

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…

3 days ago