POSTMAN NEWS

ನೈಜ ಸುದ್ದಿ ನೇರ ಬಿತ್ತರ..

ನಾಪತ್ತೆಯಾಗಿದ್ದ ಯುವಕನ ಶವ ಕೊಳೆತ ಸ್ಥಿತಿಯಲ್ಲಿ 5ms ಕಾಡಿನಲ್ಲಿ ಪತ್ತೆ

GridArt 20260311

The body of a 25-year-old missing youth from Marnamibailu near Huncha was found in a decomposed and hanging condition near the 5MS area. Police have shifted the body to Meggan Hospital in Shivamogga for postmortem and registered a case for further investigation.

ರಿಪ್ಪನ್‌ಪೇಟೆ : ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಯುವಕನೊಬ್ಬನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ.

ಮೃತ ಯುವಕನನ್ನು ಹುಂಚ ಸಮೀಪದ ಮಾರ್ನಮಿಬೈಲು ಗ್ರಾಮದ ನಿವಾಸಿ ಧನುಷ್ ಎನ್ (25) ಎಂದು ಗುರುತಿಸಲಾಗಿದೆ.

ಧನುಷ್ ಕಳೆದ ಜನವರಿ 19, 2026 ರಂದು ಮನೆಯಿಂದ ಹೊರಟು ಹೋಗಿದ್ದ ಅವರು ಬಳಿಕ ಮನೆಗೆ ಮರಳಿ ಬಂದಿರಲಿಲ್ಲ. ಇದರಿಂದ ಆತಂಕಗೊಂಡ ಕುಟುಂಬದವರು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ಈ ನಡುವೆ ಬುಧವಾರ 5MS ಪ್ರದೇಶದ ಸಮೀಪ ತಿಗುಣೆಕೊಪ್ಪ ಕಾಡು ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಯುವಕನ ಮೃತದೇಹವನ್ನು ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ತಿಳಿದು ತಕ್ಷಣವೇ ಸ್ಥಳಕ್ಕೆ ಧಾವಿಸಿದ ಕುಂಸಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಮೃತದೇಹವನ್ನು ವಶಕ್ಕೆ ಪಡೆದುಕೊಂಡರು.

ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಲಾಗಿದೆ. ಹಲವು ದಿನಗಳಿಂದ ಶವ ಅಲ್ಲೇ ಇದ್ದ ಕಾರಣ ದೇಹ ಸಂಪೂರ್ಣವಾಗಿ ಕೊಳೆತ ಸ್ಥಿತಿಯಲ್ಲಿತ್ತು ಎಂದು ತಿಳಿದುಬಂದಿದೆ.

ಯುವಕನ ಸಾವಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಅಥವಾ ಬೇರೆ ಕಾರಣವಿದೆಯೇ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.