ಪ್ರವಾಸೋದ್ಯಮ ಇಲಾಖೆಯಿಂದ ಬಂಪರ್ ಅವಕಾಶ: ಮೊಬೈಲ್ ಕ್ಯಾಂಟೀನ್‌ಗೆ ಲಕ್ಷಾಂತರ ಸಹಾಯಧನ – ಇಂದೇ ಅರ್ಜಿ ಹಾಕಿ!

The Tourism Department has invited applications for subsidy under the Mobile Canteen Scheme 2025-26 in Shivamogga district. Eligible SC and ST candidates can apply to receive financial assistance for purchasing mobile canteen vehicles. Last date to apply is March 13

ಶಿವಮೊಗ್ಗ: ರಾಜ್ಯದ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸುವ ಜೊತೆಗೆ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸುವ ಉದ್ದೇಶದಿಂದ ಪ್ರವಾಸೋದ್ಯಮ ಇಲಾಖೆ 2025-26ನೇ ಸಾಲಿನಲ್ಲಿ “ಮೊಬೈಲ್ ಕ್ಯಾಂಟೀನ್ ಯೋಜನೆ” ಜಾರಿಗೆ ತಂದಿದೆ.

ಈ ಯೋಜನೆಯಡಿ ಶಿವಮೊಗ್ಗ ಜಿಲ್ಲೆಯ ನಿವಾಸಿಗಳಾಗಿರುವ ಪರಿಶಿಷ್ಟ ಜಾತಿಯ 6 ಮಂದಿ ಹಾಗೂ ಪರಿಶಿಷ್ಟ ಪಂಗಡದ 4 ಮಂದಿಗೆ ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಸಹಾಯಧನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಯೋಜನೆಯ ಪ್ರಯೋಜನ ಪಡೆಯಲು ಅಭ್ಯರ್ಥಿಗಳು 20 ರಿಂದ 55 ವರ್ಷದೊಳಗಿನವರಾಗಿರಬೇಕು. 10ನೇ ತರಗತಿ ಉತ್ತೀರ್ಣರಾಗಿರಬೇಕು ಹಾಗೂ ಲಘು ವಾಹನ ಚಾಲನಾ ಪರವಾನಗಿ ಹೊಂದಿರಬೇಕು. ಜೊತೆಗೆ ಆಧಾರ್ ಕಾರ್ಡ್ ಪ್ರತಿ, ಚಾಲ್ತಿಯಲ್ಲಿರುವ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪತ್ರ, ಬ್ಯಾಂಕ್‌ನಿಂದ ಸಾಲ ಪಡೆಯಲು ಅರ್ಹತೆ ಹೊಂದಿರುವ ಬಗ್ಗೆ ಮಂಜೂರಾತಿ ಅಥವಾ ದೃಢೀಕರಣ ಪತ್ರ ಸಲ್ಲಿಸಬೇಕು.

ಅಭ್ಯರ್ಥಿಗಳು ಇಲಾಖೆಯಿಂದ ನೀಡಲಾಗುವ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಕಡ್ಡಾಯವಾಗಿ ಪಡೆಯುವುದಾಗಿ ಪ್ರಮಾಣ ಪತ್ರ ಸಲ್ಲಿಸಬೇಕು. ಜೊತೆಗೆ ಯಾವುದೇ ಸರ್ಕಾರಿ ಇಲಾಖೆ ಅಥವಾ ನಿಗಮ/ಮಂಡಳಿಯಲ್ಲಿ ಖಾಯಂ ನೌಕರರಾಗಿಲ್ಲವೆಂಬ ಸ್ವಯಂ ಘೋಷಣೆಯನ್ನೂ ಅರ್ಜಿಯೊಂದಿಗೆ ಸಲ್ಲಿಸಬೇಕು. ಅರ್ಜಿಯೊಂದಿಗೆ ಸಲ್ಲಿಸುವ ಎಲ್ಲಾ ದಾಖಲಾತಿಗಳನ್ನು ಸ್ವಯಂ ದೃಢೀಕರಿಸಿ ಸಲ್ಲಿಸುವುದು ಅನಿವಾರ್ಯವಾಗಿದೆ.
ಆಸಕ್ತರು ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆ, ‘ಎ’ ಬ್ಲಾಕ್, 3ನೇ ತಿರುವು, ಗೋಪಾಲಗೌಡ ಬಡಾವಣೆ, ಶಿವಮೊಗ್ಗ ಕಛೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಪೂರಕ ದಾಖಲೆಗಳೊಂದಿಗೆ ಮಾರ್ಚ್ 13ರೊಳಗಾಗಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪ್ರವಾಸೋದ್ಯಮ ಸಮಿತಿ ಅಧ್ಯಕ್ಷರಾದ ಪ್ರಭುಲಿಂಗ ಕವಳಿಕಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08182-251444 ಅನ್ನು ಸಂಪರ್ಕಿಸಬಹುದು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

3 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

23 hours ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

1 day ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

1 day ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

2 days ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

2 days ago