w
Headlines
Home » ಸ್ನೇಹಿತೆಯ ಪ್ರಿಯಕರನ ಕರೆ ರಿಸೀವ್ ಮಾಡಿದ್ದಕ್ಕೆ ಗಂಡ ಕಿರಿಕ್ : ಸಾವಿನಲ್ಲಿ ಅಂತ್ಯವಾದ ಜಗಳ

ಸ್ನೇಹಿತೆಯ ಪ್ರಿಯಕರನ ಕರೆ ರಿಸೀವ್ ಮಾಡಿದ್ದಕ್ಕೆ ಗಂಡ ಕಿರಿಕ್ : ಸಾವಿನಲ್ಲಿ ಅಂತ್ಯವಾದ ಜಗಳ

N7038389551773101767335cc1c2413fec9be9da178e6d54bfaf5351195196965647fe41052cbd82a96c009

A 25-year-old woman was found dead in R. Chokkanahalli village of Chikkaballapura district after a quarrel with her husband over a phone call from her friend’s lover. The woman’s family has accused the husband of murder, and police have launched an investigation.

ಚಿಕ್ಕಬಳ್ಳಾಪುರ: ಸ್ನೇಹಿತೆಯ ಪ್ರಿಯಕರನ ಫೋನ್ ಕಾಲ್ ವಿಚಾರವಾಗಿ ಗಂಡ-ಹೆಂಡತಿ ನಡುವೆ ಉಂಟಾದ ಗಲಾಟೆ ದುರಂತ ಅಂತ್ಯ ಕಂಡ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಆರ್. ಚೊಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತಳನ್ನು ವರಲಕ್ಷ್ಮಿ (25) ಎಂದು ಗುರುತಿಸಲಾಗಿದೆ.

ವರಲಕ್ಷ್ಮಿಯ ಸ್ನೇಹಿತೆ ಶ್ರಾವಣಿಯ ಪ್ರಿಯಕರ ವರಲಕ್ಷ್ಮಿಯ ಮೊಬೈಲ್‌ಗೆ ಕರೆ ಮಾಡಿದ್ದಾನೆ. ಆ ಸಮಯದಲ್ಲಿ ವರಲಕ್ಷ್ಮಿಯ ಗಂಡ ಗಂಗರಾಜು ಫೋನ್‌ನ್ನು ರಿಸೀವ್ ಮಾಡಿದ್ದಾನೆ. ಇದರಿಂದ ಅನುಮಾನಗೊಂಡ ಗಂಗರಾಜು, ಪ್ರೇಮಿಗಳ ಮಧ್ಯೆ ಮಧ್ಯಸ್ಥಿಕೆ ವಹಿಸಬೇಡ ಎಂದು ಹೆಂಡತಿಗೆ ಬೈದು ಬುದ್ಧಿವಾದ ಹೇಳಿದ್ದಾನೆ ಎಂದು ತಿಳಿದುಬಂದಿದೆ.

ಈ ವಿಚಾರದಲ್ಲಿ ದಂಪತಿ ನಡುವೆ ತೀವ್ರ ವಾಗ್ವಾದ ನಡೆದಿದ್ದು, ನಂತರ ವರಲಕ್ಷ್ಮಿ ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಇದರಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇತ್ತ, ವರಲಕ್ಷ್ಮಿಯ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದು, ಗಂಗರಾಜನೇ ವರಲಕ್ಷ್ಮಿಯನ್ನು ನೇಣಿಗೆ ಹಾಕಿ ಕೊಂದಿದ್ದಾನೆ ಎಂದು ಆರೋಪಿಸಿದ್ದಾರೆ. ಜೊತೆಗೆ ಮೃತದೇಹವನ್ನು ಸಕಾಲಕ್ಕೆ ತೋರಿಸಲಿಲ್ಲ ಎಂದು ಹೇಳಿ ಪೆರೇಸಂದ್ರ ಪೊಲೀಸರು ಹಾಗೂ ಗುಡಿಬಂಡೆ ತಾಲೂಕು ಆಸ್ಪತ್ರೆ ವಿರುದ್ಧವೂ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆ ಕುರಿತು ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.