Headlines

ಪೊಕ್ಸೊ ಪ್ರಕರಣ: ಬಾಲಕಿಗೆ ಲೈಂಗಿಕ ದೌರ್ಜನ್ಯ – ಯುವಕನಿಗೆ 20 ವರ್ಷ ಕಠಿಣ ಜೈಲುಶಿಕ್ಷೆ

A Shivamogga court has sentenced a Shiralakoppa youth to 20 years of rigorous imprisonment and imposed a ₹1 lakh fine in a POCSO case involving sexual assault of a minor girl after luring her with a promise of marriage.

ಶಿವಮೊಗ್ಗ: ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುತ್ತೇನೆ ಎಂದು ನಂಬಿಸಿ ಪರಿಚಯ ಮಾಡಿಕೊಂಡು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಶಿರಾಳಕೊಪ್ಪದ ಯುವಕನಿಗೆ ಶಿವಮೊಗ್ಗದ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾವಾಸ ಶಿಕ್ಷೆ ಹಾಗೂ ₹1 ಲಕ್ಷ ದಂಡ ವಿಧಿಸಿ ತೀರ್ಪು ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ, ಪೋಕ್ಸೊ ಕಾಯ್ದೆ ಹಾಗೂ ಎಸ್‌ಸಿ-ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆಯನ್ನು ಡಿಎಸ್ಪಿ ಕೇಶವ ಕೆ.ವಿ. ಅವರು ನಡೆಸಿ ಆರೋಪಿತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.

ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀಧರ ಅವರು ವಾದ ಮಂಡಿಸಿದ್ದರು. ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್‌ಟಿಎಸ್‌ಸಿ-1)ದಲ್ಲಿ ಪ್ರಕರಣದ ವಿಚಾರಣೆ ನಡೆಯಿತು.

ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ನಿಂಗನಗೌಡ ಭ. ಪಾಟೀಲ್ ಅವರು ಮಾ.10ರಂದು ಆರೋಪಿಗೆ 20 ವರ್ಷಗಳ ಕಠಿಣ ಕಾರಾವಾಸ ಶಿಕ್ಷೆ ಹಾಗೂ ₹1 ಲಕ್ಷ ದಂಡ ವಿಧಿಸಿ ಆದೇಶಿಸಿದ್ದಾರೆ. ಅಲ್ಲದೆ ನೊಂದ ಬಾಲಕಿಯ ಕುಟುಂಬಕ್ಕೆ ಸರ್ಕಾರದಿಂದ ₹4 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯ ಸೂಚಿಸಿದೆ.

About The Author