POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಹಳ್ಳಕ್ಕೆ ಉರುಳಿದ ಖಾಸಗಿ ಬಸ್: ಹಲವರಿಗೆ ಗಾಯ, ಇಬ್ಬರ ಕಾಲು ಮುರಿತ

GridArt 20260330

ಹಳ್ಳಕ್ಕೆ ಉರುಳಿದ ಖಾಸಗಿ ಬಸ್: ಹಲವರಿಗೆ ಗಾಯ, ಇಬ್ಬರ ಕಾಲು ಮುರಿತ

A private bus from Davanagere to Bhadravathi fell into a stream near Kagehalli in Shivamogga district, injuring several passengers, with two suffering leg fractures

ಶಿವಮೊಗ್ಗ : ದಾವಣಗೆರೆಯಿಂದ ಭದ್ರಾವತಿಗೆ ತೆರಳುತ್ತಿದ್ದ ಖಾಸಗಿ ಬಸ್‌ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಪರಿಣಾಮ ಹಲವರು ಗಾಯಗೊಂಡ ಘಟನೆ ಭದ್ರಾವತಿ ತಾಲ್ಲೂಕಿನ ವೀರಾಪುರ ಸಮೀಪದ ಕಾಗೆಹಳ್ಳದಲ್ಲಿ ಸೋಮವಾರ ನಡೆದಿದೆ.

ಮಾಹಿತಿಯಂತೆ, ದಾವಣಗೆರೆಯಿಂದ ಪ್ರಯಾಣ ಆರಂಭಿಸಿದ್ದ ಬಸ್‌ ಚನ್ನಗಿರಿ ದಾಟಿ ಕಾಗೆಹಳ್ಳದ ಸೇತುವೆ ಸಮೀಪಕ್ಕೆ ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಸೇತುವೆಯಿಂದ ಕೆಳಗೆ ಉರುಳಿದೆ. ಘಟನೆಯ ವೇಳೆ ಬಸ್‌ನಲ್ಲಿ ಸುಮಾರು 35 ಮಂದಿ ಪ್ರಯಾಣಿಕರು ಇದ್ದರು ಎಂದು ತಿಳಿದುಬಂದಿದೆ.

ಅಪಘಾತದ ಪರಿಣಾಮವಾಗಿ ಮೂರ್ನಾಲ್ಕು ಮಂದಿಗೆ ತೀವ್ರ ಗಾಯಗಳಾಗಿದ್ದು, ಇಬ್ಬರ ಕಾಲುಗಳು ಮುರಿದಿವೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್‌ ಚಾಲಕನಿಗೂ ಗಂಭೀರ ಗಾಯಗಳಾಗಿದ್ದು, ಆತನು ಕೂಡ ಆಸ್ಪತ್ರೆಗೆ ಸಾಗಿಸಲಾಗಿದೆ.

ಘಟನೆಯ ತಕ್ಷಣ ಸ್ಥಳೀಯ ಗ್ರಾಮಸ್ಥರು ಧಾವಿಸಿ ಬಸ್‌ನಲ್ಲಿದ್ದ ಪ್ರಯಾಣಿಕರನ್ನು ಹೊರತೆಗೆದು ರಕ್ಷಣೆ ಕಾರ್ಯದಲ್ಲಿ ತೊಡಗಿದರು. ಅವರ ತ್ವರಿತ ಕಾರ್ಯಾಚರಣೆಯಿಂದ ಹೆಚ್ಚಿನ ಪ್ರಾಣಾಪಾಯ ತಪ್ಪಿದಂತೆ ಹೇಳಲಾಗಿದೆ. ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಪಘಾತದ ನಿಖರ ಕಾರಣ ತಿಳಿದುಬರುವುದಿಲ್ಲದಿದ್ದರೂ , ವೇಗ ಮತ್ತು ನಿಯಂತ್ರಣ ತಪ್ಪಿರುವುದೇ ಪ್ರಮುಖ ಕಾರಣ ಎಂದು ಶಂಕಿಸಲಾಗಿದೆ. ಈ ಘಟನೆ ಪ್ರದೇಶದಲ್ಲಿ ಆತಂಕದ ವಾತಾವರಣವನ್ನು ಸೃಷ್ಟಿಸಿದ್ದು, ಸಾರ್ವಜನಿಕರು ರಸ್ತೆ ಸುರಕ್ಷತೆ ಬಗ್ಗೆ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.