ಗ್ರಾಮ ಪಂಚಾಯತ್ ಜಾಗ ಒತ್ತುವರಿ ಆರೋಪ: ತೆರವು ಕಾರ್ಯಾಚರಣೆಯಲ್ಲಿ ಉದ್ವಿಗ್ನತೆ, ಮಾತಿನ ಚಕಮಕಿ

Tension erupted in Ripponpet as gram panchayat officials attempted to clear alleged encroachment on village site land, leading to a verbal clash and police case.

ರಿಪ್ಪನ್ ಪೇಟೆ : ಪಟ್ಟಣದ ಹಳೆಯ ಸಂತೇ ಮಾರ್ಕೆಟ್ ಪ್ರದೇಶದಲ್ಲಿ ಇರುವ ಸರ್ವೆ ನಂ. 43 ರ ಗ್ರಾಮ ಪಂಚಾಯತ್ ಸುಪರ್ದಿಯ ಜಾಗದಲ್ಲಿ ಅಕ್ರಮ ಒತ್ತುವರಿ ಆರೋಪದ ಹಿನ್ನೆಲೆ ಗ್ರಾಮ ಪಂಚಾಯತ್ ವತಿಯಿಂದ ನಡೆಸಿದ ತೆರವು ಕಾರ್ಯಾಚರಣೆ ವೇಳೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿ, ಒತ್ತುವರಿದಾರರು ಮತ್ತು ಗ್ರಾಪಂ ಸಿಬ್ಬಂದಿಗಳು , ನಿಕಟಪೂರ್ವ ಗ್ರಾಪಂ ಸದಸ್ಯರುಗಳ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ.

ಗ್ರಾಮ ಪಂಚಾಯತ್ ಅಧಿಕಾರಿಗಳ ಪ್ರಕಾರ, ಸರ್ವೆ ನಂ. 43ರ ಜಾಗದಲ್ಲಿ ಕೆಲವರು ರಾತ್ರೋರಾತ್ರಿ ಬೇಲಿ ನಿರ್ಮಿಸಿ ಶೆಡ್ ಹಾಕಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ತೆರವು ಕಾರ್ಯಾಚರಣೆ ಕೈಗೊಳ್ಳಲಾಯಿತು. ಆದರೆ, ಸ್ಥಳದಲ್ಲಿದ್ದ ಒತ್ತುವರಿದಾರರು ತಮ್ಮ ಬಳಿ ಜಾಗಕ್ಕೆ ಸಂಬಂಧಿಸಿದ ಹಕ್ಕುಪತ್ರವಿದೆ ಎಂದು ಹೇಳಿ ವಿರೋಧ ವ್ಯಕ್ತಪಡಿಸಿದರು.

ಈ ವೇಳೆ ಎರಡೂ ಪಾಳಯಗಳ ನಡುವೆ ವಾಗ್ವಾದ ತೀವ್ರಗೊಂಡು, ಪರಿಸ್ಥಿತಿ ನಿಯಂತ್ರಣ ತಪ್ಪುವ ಮಟ್ಟಕ್ಕೆ ತಲುಪಿತು. ಎರಡು ಪಾಳಯದವರು ಪಟ್ಟಣದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಪರಸ್ಪರ ದೂರು-ಪ್ರತಿ ದೂರುಗಳನ್ನು ದಾಖಲಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂದಿಸಿದಂತೆ ಕಳೆದ ಎರಡು ವರ್ಷಗಳ ಹಿಂದೆ ಇದೇ ಗುಂಪಿನವರು ಸದರಿ ಜಾಗದಲ್ಲಿ ಬೇಲಿ ಹಾಗೂ ಶೆಡ್ ನಿರ್ಮಿಸಿದ್ದು ಆ ಸಂಧರ್ಭದಲ್ಲಿ ಗ್ರಾಪಂ ವತಿಯಿಂದ ತೆರವುಗೊಳಿಸಲಾಗಿತ್ತು ಸದರಿ ಪ್ರಕರಣ ನ್ಯಾಯಲಯದ ಮೆಟ್ಟಿಲೇರಿತ್ತು..

ನಿಕಟಪೂರ್ವ ಗ್ರಾಪಂ ಸದಸ್ಯರಾದ ನಿರೂಪ್ ಕುಮಾರ್, ಪ್ರಕಾಶ್ ಪಾಲೇಕರ್, ಮಲ್ಲಿಕಾರ್ಜುನ್, ಸುಂದರೇಶ್ ಹಾಗೂ ಸಿಬ್ಬಂದಿಗಳಾದ ನಾಗೇಶ್ ಮೋರೆ, ರಾಜೇಶ್ ಸೇರಿದಂತೆ ಇತರರು ಒತ್ತುವರಿ ತೆರವು‌ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು‌.

ಈ ಘಟನೆ ಈಗ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…

1 hour ago

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…

2 hours ago

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…

3 hours ago

ಈದ್ ಮಿಲಾದ್ – ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್ ವಾರ್ನಿಂಗ್

ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…

4 hours ago

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…

11 hours ago

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…

11 hours ago