Police in Ripponpet conducted a raid on illegal gambling near Koduru village and registered a case, while in a separate incident, a man was taken into custody for consuming ganja and behaving indecently in a public place.
ಗಾಂಜಾ ಸೇವನೆ ಮಾಡಿ ಸಾರ್ವಜನಿಕವಾಗಿ ಅಸಭ್ಯ ವರ್ತನೆ – ವ್ಯಕ್ತಿ ವಶಕ್ಕೆ
ರಿಪ್ಪನ್ ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಸ್ಪೀಟು ಹಾಗೂ ಗಾಂಜಾ ಪ್ರಕರಣದಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲಾಗಿದೆ.
ಪಟ್ಟಣದ ಸಮೀಪದ ಕೊಡೂರು ಗ್ರಾಮದ ಕಾಗೆಮರಡು ಪ್ರದೇಶದಲ್ಲಿ ಅಕ್ರಮವಾಗಿ ಅಂದರ್-ಬಹರ್ ಇಸ್ಪೀಟು ಜೂಜಾಟ ನಡೆಸುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಗುರುವಾರ ಗಸ್ತು ತಿರುಗುತ್ತಿದ್ದ ವೇಳೆ ಶಾಂತಪುರ ಬಸ್ ನಿಲ್ದಾಣದ ಸಮೀಪ ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು. ಈ ವೇಳೆ ಕಾಗೆಮರಡು ಬಳಿ ಕೆಲವರು ಗುಂಪುಗೂಡಿ ಜೂಜಾಟದಲ್ಲಿ ತೊಡಗಿರುವುದು ಬೆಳಕಿಗೆ ಬಂದಿದೆ.
ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸ್ ಸಿಬ್ಬಂದಿಗಳಾದ ಉಮೇಶ್ ಮತ್ತು ರಾಮಚಂದ್ರ ಅವರು ದಾಳಿ ನಡೆಸಿ ಜೂಜಾಟದಲ್ಲಿ ತೊಡಗಿದ್ದವರನ್ನು ಪತ್ತೆಹಚ್ಚಿದರು. ಆರೋಪಿಗಳ ವಿರುದ್ಧ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.
ಗಾಂಜಾ ಸೇವನೆ ಮಾಡಿ ಸಾರ್ವಜನಿಕವಾಗಿ ಅಸಭ್ಯ ವರ್ತನೆ – ವ್ಯಕ್ತಿ ವಶಕ್ಕೆ
ಇನ್ನೊಂದು ಪ್ರತ್ಯೇಕ ಪ್ರಕರಣದಲ್ಲಿ, ಕೊಡೂರು ಪಂಚಾಯತ್ ವ್ಯಾಪ್ತಿಯ ಶಾಂತಪುರ ಬಸ್ ನಿಲ್ದಾಣದ ಬಳಿ ವ್ಯಕ್ತಿಯೋಬ್ಬ ಗಾಂಜಾ ಸೇವನೆ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸಿದ ಘಟನೆ ಬೆಳಕಿಗೆ ಬಂದಿದೆ.
ಬುಧವಾರ ಗಸ್ತು ವೇಳೆ ಅನುಮಾನಗೊಂಡ ಪೊಲೀಸರು ಆತನನ್ನು ವಶಕ್ಕೆ ಪಡೆದು ಹೊಸನಗರದ ಸರ್ಕಾರಿ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದರು. ಪರೀಕ್ಷೆಯ ಬಳಿಕ ಆತ ಗಾಂಜಾ ಸೇವನೆ ಮಾಡಿರುವುದು ವೈದ್ಯರಿಂದ ದೃಢಪಟ್ಟಿದೆ.
ಬಂಧಿತನನ್ನು ಶಾಂತಪುರ ಗ್ರಾಮದ ಮಹಮ್ಮದ್ ರಫೀಕ್ ಬಿನ್ ಹಸನ್ ಸಾಬ್ (54) ಎಂದು ಗುರುತಿಸಲಾಗಿದೆ.
ಈ ಸಂಬಂಧ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.




