Ripponpet police arrested a 21-year-old for consuming ganja and behaving indecently in public near Gandhinagar. A case has been registered under the NDPS Act after medical confirmation.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಗಾಂಧಿನಗರದ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಹೆದ್ದಾರಿಪುರ ಸಮೀಪದ ಕಲ್ಲೂರು ಗ್ರಾಮದ ನಿವಾಸಿ ಸಂಜಯ್ (21) ಬಂಧಿತ ಆರೋಪಿಯಾಗಿದ್ದಾನೆ.
ಪಟ್ಟಣದ ಗಾಂಧಿನಗರದ ಬಳಿಯಲ್ಲಿ ರಿಪ್ಪನ್‌ಪೇಟೆ ಪೊಲೀಸರು ಗಸ್ತು ಸಂಚರಿಸುತ್ತಿರುವಾಗ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದವನನ್ನು ಕಂಡು ಆತನ ಬಳಿ ಹೋಗಿ ಆತನನ್ನು ವಿಚಾರಿಸಿದ್ದಾರೆ.ಈ ಸಮಯದಲ್ಲಿ ಆರೋಪಿಯ ಮಾತು ತೊದಲುತ್ತಿದ್ದು, ಬಾಯಿಯಿಂದ ಅಮಲು ಪದಾರ್ಥ ಸೇದಿದ ವಾಸನೆ ಬರುತ್ತಿದ್ದರಿಂದ, ಆತನನ್ನು ಕೂಲಂಕುಷವಾಗಿ ವಿಚಾರಿಸಿದಾಗ ಆತನು ಬೀಡಿ ಜೊತೆ ಗಾಂಜಾ ಸೇರಿಸಿ ಸೇದಿದ ಬಗ್ಗೆ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ.
ಕೂಡಲೇ ಆತನನ್ನು ವೈದ್ಯಕೀಯ ತಪಾಸಣೆಗೆ ಸಿಬ್ಬಂದಿಗಳಾದ ರಾಮಚಂದ್ರ ಹಾಗೂ ವಿಶ್ವನಾಥ್ ಜೊತೆಯಲ್ಲಿ ಮೆಗಾನ್ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು, ಆತನು ಗಾಂಜಾ ಸೇವನೆ ಮಾಡಿರುವ ಬಗ್ಗೆ ವೈದಕೀಯ ಪರೀಕ್ಷೆಯಿಂದ ದೃಡಪಟ್ಟಿರುವುದರಿಂದ ಈತನ ವಿರುದ್ಧ ಮಾದಕ ದ್ರವ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ.
ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಂಜಾ ಸೇವನೆ ಹಾಗೂ ಮಾರಾಟದ ಬಗ್ಗೆ ಮಾಹಿತಿ ಕೊಡಿ – ಸಾರ್ವಜನಿಕರಲ್ಲಿ ಪೊಲೀಸ್ ಮನವಿ
ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಸೇವನೆ ಹಾಗೂ ಮಾರಾಟದ ಬಗ್ಗೆ ಸಾರ್ವಜನಿಕರು ಮಾಹಿತಿಯನ್ನು 9480803365 ನಂಬರಿಗೆ ಕರೆ ಮಾಡುವ ಮೂಲಕ ತಿಳಿಸುವ ಮೂಲಕ ಇಲಾಖೆಗೆ ಸಹಕರಿಸಬೇಕಾಗಿದೆ ಹಾಗೇಯೇ ಮಾಹಿತಿದಾರರ ಬಗ್ಗೆ ಗೌಪ್ಯತೆ ಕಾಪಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…