Headlines

ರಿಪ್ಪನ್‌ಪೇಟೆ – ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ

Ripponpet police arrested a 21-year-old for consuming ganja and behaving indecently in public near Gandhinagar. A case has been registered under the NDPS Act after medical confirmation.

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಗಾಂಧಿನಗರದ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಹೆದ್ದಾರಿಪುರ ಸಮೀಪದ ಕಲ್ಲೂರು ಗ್ರಾಮದ ನಿವಾಸಿ ಸಂಜಯ್ (21) ಬಂಧಿತ ಆರೋಪಿಯಾಗಿದ್ದಾನೆ.

ಪಟ್ಟಣದ ಗಾಂಧಿನಗರದ ಬಳಿಯಲ್ಲಿ ರಿಪ್ಪನ್‌ಪೇಟೆ ಪೊಲೀಸರು ಗಸ್ತು ಸಂಚರಿಸುತ್ತಿರುವಾಗ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದವನನ್ನು ಕಂಡು ಆತನ ಬಳಿ ಹೋಗಿ ಆತನನ್ನು ವಿಚಾರಿಸಿದ್ದಾರೆ.ಈ ಸಮಯದಲ್ಲಿ ಆರೋಪಿಯ ಮಾತು ತೊದಲುತ್ತಿದ್ದು, ಬಾಯಿಯಿಂದ ಅಮಲು ಪದಾರ್ಥ ಸೇದಿದ ವಾಸನೆ ಬರುತ್ತಿದ್ದರಿಂದ, ಆತನನ್ನು ಕೂಲಂಕುಷವಾಗಿ ವಿಚಾರಿಸಿದಾಗ ಆತನು ಬೀಡಿ ಜೊತೆ ಗಾಂಜಾ ಸೇರಿಸಿ ಸೇದಿದ ಬಗ್ಗೆ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ.

ಕೂಡಲೇ  ಆತನನ್ನು ವೈದ್ಯಕೀಯ ತಪಾಸಣೆಗೆ ಸಿಬ್ಬಂದಿಗಳಾದ ರಾಮಚಂದ್ರ ಹಾಗೂ ವಿಶ್ವನಾಥ್ ಜೊತೆಯಲ್ಲಿ ಮೆಗಾನ್ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು, ಆತನು ಗಾಂಜಾ ಸೇವನೆ ಮಾಡಿರುವ ಬಗ್ಗೆ ವೈದಕೀಯ ಪರೀಕ್ಷೆಯಿಂದ ದೃಡಪಟ್ಟಿರುವುದರಿಂದ ಈತನ ವಿರುದ್ಧ ಮಾದಕ ದ್ರವ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ.

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಾಂಜಾ ಸೇವನೆ ಹಾಗೂ ಮಾರಾಟದ ಬಗ್ಗೆ ಮಾಹಿತಿ ಕೊಡಿ – ಸಾರ್ವಜನಿಕರಲ್ಲಿ ಪೊಲೀಸ್ ಮನವಿ

ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಸೇವನೆ ಹಾಗೂ ಮಾರಾಟದ ಬಗ್ಗೆ ಸಾರ್ವಜನಿಕರು ಮಾಹಿತಿಯನ್ನು 9480803365 ನಂಬರಿಗೆ ಕರೆ ಮಾಡುವ ಮೂಲಕ ತಿಳಿಸುವ ಮೂಲಕ ಇಲಾಖೆಗೆ ಸಹಕರಿಸಬೇಕಾಗಿದೆ ಹಾಗೇಯೇ ಮಾಹಿತಿದಾರರ ಬಗ್ಗೆ ಗೌಪ್ಯತೆ ಕಾಪಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

About The Author

Exit mobile version