w
Headlines
Home » ಮಾನಸಿಕ ಒತ್ತಡದ ಹಿನ್ನಲೆ ಕಳೆನಾಶಕ ಸೇವಿಸಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಮಾನಸಿಕ ಒತ್ತಡದ ಹಿನ್ನಲೆ ಕಳೆನಾಶಕ ಸೇವಿಸಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

GridArt 20260302

A young man from Kaggali village near Ripponpet died after consuming weedicide. He was under treatment in Shivamogga but succumbed to injuries. Police have registered a case and investigation is underway.

ರಿಪ್ಪನ್‌ಪೇಟೆ: ರಿಪ್ಪನ್‌ಪೇಟೆ ಸಮೀಪದ ಕಗ್ಗಲಿ ಗ್ರಾಮದ ಯುವಕ ರಾಕೇಶ್ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ವರದಿಯಾಗಿದೆ.

ಫೆಬ್ರವರಿ 24ರಂದು ಮನೆ ಸಮೀಪದ ಅಡಿಕೆ ತೋಟದಲ್ಲಿ ರಾಕೇಶ್ ವಿಷ ಸೇವಿಸಿ ಕುಸಿದುಬಿದ್ದಿದ್ದನ್ನು ಗಮನಿಸಿದ ಕುಟುಂಬಸ್ಥರು ಮತ್ತು ಸ್ಥಳೀಯರು ತಕ್ಷಣವೇ ಅವರನ್ನು ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಾರ್ಚ್ 2ರ ರಾತ್ರಿ 1.20ರ ಸುಮಾರಿಗೆ ರಾಕೇಶ್ ಮೃತಪಟ್ಟಿದ್ದಾರೆ.

ದೂರಿನ ಪ್ರಕಾರ, ರಾಕೇಶ್ ಸುಮಾರು ಒಂದೂವರೆ ತಿಂಗಳ ಹಿಂದೆ ಬೈಕ್‌ನಿಂದ ಬಿದ್ದು ತಲೆಗೆ ಗಂಭೀರ ಪೆಟ್ಟು ಮಾಡಿಕೊಂಡಿದ್ದರು. ಈ ಹಿನ್ನೆಲೆ ಅವರಿಗೆ ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆ ಹಾಗೂ ಮಂಗಳೂರಿನ ಏನಪೋಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿತ್ತು. ಅಪಘಾತ ಸ್ವತಃ ಸಂಭವಿಸಿದ್ದರಿಂದ ಈ ಕುರಿತು ಯಾವುದೇ ದೂರು ದಾಖಲಾಗಿರಲಿಲ್ಲ.

ಚಿಕಿತ್ಸೆಯ ಬಳಿಕ ರಾಕೇಶ್ ಮನೆಗೆ ಮರಳಿದ್ದರೂ, ಮಾನಸಿಕವಾಗಿ ಮಂಕಾಗಿದ್ದು, ಹೆಚ್ಚಿನ ಸಮಯ ಮೌನವಾಗಿಯೇ ಕಳೆಯುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಇದೇ ಅವಧಿಯಲ್ಲಿ ಮನೆಯ ಬಚ್ಚಲು ಮನೆಯಲ್ಲಿ ಜಾರಿ ಬಿದ್ದು ಮತ್ತೆ ತಲೆಗೆ ಏಟು ಮಾಡಿಕೊಂಡಿದ್ದ ಘಟನೆ ಕೂಡ ನಡೆದಿದೆ ಎನ್ನಲಾಗಿದೆ. ಈ ಎಲ್ಲ ಘಟನೆಗಳನ್ನು ಮನಸ್ಸಿಗೆ ಹಚ್ಚಿಕೊಂಡಿದ್ದ ರಾಕೇಶ್ ಫೆಬ್ರವರಿ 24ರಂದು ಮಧ್ಯಾಹ್ನ ಸುಮಾರು 1 ಗಂಟೆಯ ವೇಳೆಗೆ ಅಡಿಕೆ ತೋಟದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ವಿಷ ಸೇವನೆಯ ಬಳಿಕ ಅವರನ್ನು ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಟ್ರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಹಲವು ದಿನಗಳ ಕಾಲ ಚಿಕಿತ್ಸೆ ಪಡೆದರೂ ಅವರ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ.

ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿನ ನಿಖರ ಕಾರಣಗಳ ಕುರಿತು ತನಿಖೆ ಮುಂದುವರಿದಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.