ರಿಪ್ಪನ್ಪೇಟೆಯಲ್ಲಿ ಪೆಟ್ರೋಲ್ ಕೊರತೆ ಇಲ್ಲ: ಪ್ರಿಮಿಯಂ ಪೆಟ್ರೋಲ್ ದರ ಏರಿಕೆ ಮಾತ್ರ, ಸಾಮಾನ್ಯ ಪೆಟ್ರೋಲ್ ಸ್ಥಿರ
ರಿಪ್ಪನ್ಪೇಟೆ : ಪಟ್ಟಣದಲ್ಲಿ ಪೆಟ್ರೋಲ್ ಕೊರತೆ ಇದೆ ಎಂಬ ವದಂತಿಗಳಿಗೆ ತೆರೆ ಎಳೆದಿರುವ ಬಂಕ್ ಮಾಲೀಕರು, ಪಟ್ಟಣದಲ್ಲಿ ಯಾವುದೇ ಇಂಧನ ಅಭಾವವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪಟ್ಟಣದ MRPL ಪೆಟ್ರೋಲ್ ಬಂಕ್ನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಸಮರ್ಪಕವಾಗಿ ಲಭ್ಯವಿದ್ದು, ಉಳಿದ ಬಂಕ್ಗಳಲ್ಲಿಯೂ ನಾಳೆಯೊಳಗೆ ಇಂಧನ ಸರಬರಾಜು ಆಗಲಿದೆ ಎಂದು ತಿಳಿಸಿದ್ದಾರೆ. ಹೀಗಾಗಿ ಗ್ರಾಹಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಮನವಿ ಮಾಡಿದ್ದಾರೆ.
ಇದೇ ವೇಳೆ, ಪ್ರೀಮಿಯಂ ಪೆಟ್ರೋಲ್ ದರದಲ್ಲಿ ಮಾತ್ರ ಸ್ವಲ್ಪ ಏರಿಕೆ ಕಂಡುಬಂದಿದ್ದು, ಸಾಮಾನ್ಯ (ನಾರ್ಮಲ್) ಪೆಟ್ರೋಲ್ ದರದಲ್ಲಿ ಯಾವುದೇ ಏರಿಕೆ ಆಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಆದ್ದರಿಂದ ಜನರು ಅನಗತ್ಯ ಆತಂಕಕ್ಕೆ ಒಳಗಾಗಬಾರದು ಎಂದು ತಿಳಿಸಿದ್ದಾರೆ.
ಈ ವಾರ ಹಬ್ಬಗಳ ಹಿನ್ನೆಲೆ ಜನರ ಸಂಚಾರ ಹೆಚ್ಚಿದ ಪರಿಣಾಮ ಇಂಧನದ ಬೇಡಿಕೆಯೂ ಏರಿಕೆಯಾಗಿದೆ. ಇದರಿಂದ ಕೆಲವೆಡೆ ತಾತ್ಕಾಲಿಕ ಒತ್ತಡ ಉಂಟಾದರೂ, ಪೆಟ್ರೋಲ್ ಮತ್ತು ಡೀಸೆಲ್ ಸರಬರಾಜು ನಿರಂತರವಾಗಿ ನಡೆಯುತ್ತಿದೆ ಎಂದು ಅವರು ವಿವರಿಸಿದ್ದಾರೆ.
ಒಟ್ಟಾರೆ, ರಿಪ್ಪನ್ಪೇಟೆಯಲ್ಲಿ ಇಂಧನ ಕೊರತೆ ಇಲ್ಲ ಎಂಬುದನ್ನು ಪುನರುಚ್ಚರಿಸಿದ ಬಂಕ್ ಮಾಲೀಕರು, ಗಾಳಿ ಸುದ್ದಿಗಳಿಗೆ ಒಳಗಾಗದೇ ಶಾಂತವಾಗಿರಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್