ರಿಪ್ಪನ್‌ಪೇಟೆಯಲ್ಲಿ ಸಡಗರದಿಂದ ರಂಜಾನ್ ಆಚರಣೆ | ಸಾಮರಸ್ಯದಿಂದಲೇ ಸಮಾಜದಲ್ಲಿ ನೆಮ್ಮದಿ: ಮುನೀರ್ ಸಖಾಫಿ

Ramzan was celebrated with great enthusiasm in Ripponpet, with communal prayers at Eidgah grounds. Religious leader Muneer Sakhafi emphasized unity, peace, and harmony among all communities.

ರಿಪ್ಪನ್‌ಪೇಟೆ: ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸ್ಜಿದ್‌ನ ಮುಸ್ಲಿಂ ಬಾಂಧವರು ರಂಜಾನ್ ಹಬ್ಬವನ್ನು ಭಕ್ತಿ, ಸಡಗರ ಮತ್ತು ಸಂಭ್ರಮದಿಂದ ಆಚರಿಸಿದರು. ಧರ್ಮಗುರುಗಳಾದ ಮುನೀರ್ ಸಖಾಫಿ ಮತ್ತು ಮೌಲಾನಾ ರಫೀದ್ ಹುಸೇನ್ ಅವರ ನೇತೃತ್ವದಲ್ಲಿ ಹಬ್ಬದ ಆಚರಣೆಗಳು ನಡೆದವು.

ಹೊಸನಗರ ರಸ್ತೆಯಿಂದ ಮೆರವಣಿಗೆ ಆರಂಭವಾಗಿ ಸಾಗರ ರಸ್ತೆಯ ಈದ್ಗಾ ಮೈದಾನಕ್ಕೆ ತೆರಳಿದ ಭಕ್ತರು, ಅಲ್ಲಿ ಸಾಮೂಹಿಕ ನಮಾಜ್ ಸಲ್ಲಿಸಿದರು. ಕಳೆದ 29 ದಿನಗಳ ಉಪವಾಸ ಹಾಗೂ ಧಾರ್ಮಿಕ ವಿಧಿವಿಧಾನಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದ್ದ ಮುಸ್ಲಿಂ ಸಮುದಾಯದವರು, ಚಂದ್ರದರ್ಶನದ ಹಿನ್ನೆಲೆಯಲ್ಲಿ ರಂಜಾನ್ ಹಬ್ಬವನ್ನು ಭಾನುವಾರ ಸಂಭ್ರಮದಿಂದ ಆಚರಿಸಿದರು. ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರ ತನಕ ಎಲ್ಲರೂ ಭಕ್ತಿಪೂರ್ವಕವಾಗಿ ನಮಾಜ್ ನೆರವೇರಿಸಿ ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.

ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಬಳಿಕ ಮಾತನಾಡಿದ ಧರ್ಮಗುರು ಮುನೀರ್ ಸಖಾಫಿ, ಪೈಗಂಬರ್ ಅವರ ಜೀವನ ಸಂದೇಶವನ್ನು ಅಳವಡಿಸಿಕೊಂಡರೆ ಜೀವನ ಸಾರ್ಥಕವಾಗುತ್ತದೆ ಎಂದು ಹೇಳಿದರು. ಭಾರತ ದೇಶವು ವಿವಿಧತೆಯಲ್ಲಿ ಏಕತೆಯ ಪ್ರತೀಕವಾಗಿದ್ದು, ಎಲ್ಲ ಧರ್ಮಗಳ ಸಾರ ಒಂದೇ ಆಗಿದೆ. ಯಾವುದೇ ಜಾತಿ-ಧರ್ಮ ಭೇದವಿಲ್ಲದೆ ಭಾವೈಕ್ಯತೆಯಿಂದ ಬದುಕುವುದು ಅತ್ಯಾವಶ್ಯಕ ಎಂದರು.

ಪ್ರಸ್ತುತ ಜಾಗತಿಕ ಪರಿಸ್ಥಿತಿಯಲ್ಲಿ ಯುದ್ಧದ ನೆರಳು ಕವಿದಿರುವುದನ್ನು ಉಲ್ಲೇಖಿಸಿದ ಅವರು, ದೇಶಗಳ ನಡುವೆ ಶಾಂತಿ ಮಾತುಕತೆ ನಡೆಯಲಿ ಮತ್ತು ಜಗತ್ತಿನಲ್ಲಿ ಶಾಂತಿ ನೆಲೆಸಲಿ ಎಂದು ಪ್ರಾರ್ಥಿಸಿದರು. ಧರ್ಮಗಳ ನಡುವಿನ ಸಂಘರ್ಷಗಳನ್ನು ಬದಿಗೊತ್ತಿ, ಸಹೋದರತ್ವ ಮತ್ತು ಭ್ರಾತೃತ್ವದ ಮನೋಭಾವದಿಂದ ಬದುಕುವಂತೆ ಕರೆ ನೀಡಿದರು.

ಈ ಸಂಧರ್ಭದಲ್ಲಿ ಜುಮ್ಮಾ ಮಸೀದಿ ಅಧ್ಯಕ್ಷರಾದ ಹಸನಬ್ಬ ಬ್ಯಾರಿ ,ಕಾರ್ಯದರ್ಶಿ ಶೇಖಬ್ಬ ಮೆಕ್ಕಾ ಮಸ್ಜಿದ್ ಅಧ್ಯಕ್ಷರಾದ ಅಮೀರ್ , ಕಾರ್ಯದರ್ಶಿ ಜಾಕೀರ್ ಮುಖಂಡರಾದ ಅರ್ ಎ ಚಾಬುಸಾಬ್,ಅಮೀರ್ ಹಂಜಾ ಗ್ರಾಪಂ ಸದಸ್ಯ ಆಸೀಫ಼್ ಭಾಷಾ, ಆರ್ ಎಸ್ ಶಂಶುದ್ದೀನ್, ಭಾಪುಖಾನ್ , ನಾಸೀರ್ ,ನದೀಮ್  , ರೆಹಮಾನ್ ಚಾಲಿ  ಹಾಗೂ ಇನ್ನಿತರರಿದ್ದರು.

ಸಾಗರದಲ್ಲಿ ಸಂಭ್ರಮದ ರಂಜಾನ್ ಆಚರಣೆ

ಸಾಗರ : ಪಟ್ಟಣದಲ್ಲಿ ಕೆಲ ಮುಸ್ಲಿಮರು ಶುಕ್ರವಾರವೇ ರಂಜಾನ್ ಹಬ್ಬವನ್ನು  ಸಡಗರ ಸಂಭ್ರಮದಿಂದ ಆಚರಿಸಿದರು.

ತಾಲ್ಲೂಕಿನ ಕಾರ್ಗಲ್, ಜೋಗ, ಆನಂದಪುರದ ಮುಂಬಾಳು ಮಸೀದಿ ಸೇರಿದಂತೆ ಸಾಗರ ಪಟ್ಟಣದ ಬದರ್ ಜುಮ್ಮಾ ಮಸೀದಿ,ಅಲ್ ಅಮೀನ್ ಮಸೀದಿ,ಮಸ್ಜಿದ್ ನೂರ್,ಮಹಮ್ಮದೀಯ ಮಸೀದಿ,ಅಲ್ ನೂರ್ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ, ನಮಾಜ್ ನೆರವೇರಿಸಲಾಯಿತು.

ನಂತರ ದಫನ ಭೂಮಿಗೆ ತೆರಳಿ ಅಗಲಿದ ಕುಟುಂಬದ ಸದಸ್ಯರಿಗೆ ಬೇಕಾಗಿ ಪ್ರಾರ್ಥಿಸಿದರು.ಪ್ರಾಥನೆ ನಂತರ ಮುಸ್ಲಿಮರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.

ಪ್ರಾರ್ಥನೆಗೆ ತೆರಳುವ ಮುನ್ನ ಸಮುದಾಯದ ಉಳ್ಳವರು ಬಡವರಿಗೆ ತಮ್ಮ ದುಡಿಮೆಯ ಇಂತಿಷ್ಟು ಅಂಶವನ್ನು ದಾನವಾಗಿ ನೀಡಿದರು. ಕೆಲವರು ಗೋಧಿ, ಅಕ್ಕಿ, ರಾಗಿ ನೀಡಿದರು.

ಈ ಸಂದರ್ಭದಲ್ಲಿ ಬದರ್ ಮಸೀದಿ ಧರ್ಮಗುರು ಅಬ್ದುಲ್ ಕಲಾಂ ಸಅದಿ ತಮ್ಮ ಈದ್ ಸಂದೇಶದಲ್ಲಿ ಯುವಜನತೆ ಮಾದಕ ವ್ಯಸನಗಳಿಗೆ ಬಲಿಯಾಗದಂತೆ ಜಾಗೃತಿ ಮೂಡಿಸಿದರು. ಅಲ್ಲದೆ ಎಲ್ಲರೂ ಪರಸ್ಪರ ಸಹೋದರರಂತೆ ಬದುಕಿ ಶಾಂತಿಯ ವಾತಾವರಣ ನಿರ್ಮಿಸುವಂತೆ ಸೌಹಾರ್ದ ಸಂದೇಶ ನೀಡಿದರು.

ಶಾಸಕ ಗೋಪಾಲಕೃಷ್ಣ ಬೇಳೂರು, ನಗರಸಭೆ ಮಾಜಿ ಸದಸ್ಯರಾದ ಮಹಮ್ಮದ್ ಖಾಸಿಂ,ಟಿಪ್ ಟಾಪ್ ಬಷೀರ್, ತಸ್ರೀಫ್ ಇಬ್ರಾಹಿಂ,ಅಬ್ದುಲ್ ಹಮೀದ್ ,ಎಎಸ್ಪಿ ಬೆನಕ ಪ್ರಸಾದ್ ಈದುಲ್ ಫಿತರ್ ಹಬ್ಬದ ಶುಭ ಹಾರೈಸಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…

42 minutes ago

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…

2 hours ago

ಈದ್ ಮಿಲಾದ್ – ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್ ವಾರ್ನಿಂಗ್

ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…

3 hours ago

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…

10 hours ago

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…

11 hours ago

ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ

ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ A woman was allegedly…

11 hours ago