ಸಾಸ್ತಾನ ಟೋಲ್ ಗೇಟ್‌ನಲ್ಲಿ ಸಿಬ್ಬಂದಿಗಳ ಮೇಲೆ ಹಲ್ಲೆ – ರಿಪ್ಪನ್ ಪೇಟೆಯ ಇಬ್ಬರು ಸೇರಿದಂತೆ ಮೂವರ ವಿರುದ್ದ ಪ್ರಕರಣ ದಾಖಲು

Two persons from Ripponpet were arrested and another is on the run after allegedly assaulting toll gate staff at Sasthan Toll Plaza in Udupi district. A case has been registered under relevant BNS sections.

ರಿಪ್ಪನ್ ಪೇಟೆ : ಉಡುಪಿ ಜಿಲ್ಲೆಯ ಕೋಟಾ ಪೊಲೀಸ್ ಠಾಣೆ ವ್ಯಾಪ್ತಿಯ ಸಾಸ್ತಾನ ಟೋಲ್ ಗೇಟ್‌ನಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪ್ಪನ್ ಪೇಟೆಯ ಇಬ್ಬರು ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿಯು ಪರಾರಿಯಾಗಿದ್ದು, ಅವನಿಗಾಗಿ ಹುಡುಕಾಟ ಮುಂದುವರಿದಿದೆ.

ಬಂಧಿತರನ್ನು ರಿಪ್ಪನ್ ಪೇಟೆಯ ಶಿವಮೊಗ್ಗ ರಸ್ತೆಯ ಅಡಿಕಟ್ಟು ನಿವಾಸಿ ವಿನಾಯಕ್ ಹಾಗೂ ವೆಂಕಟೇಶ್ ಪ್ರಸಾದ್ ಎಂದು ಗುರುತಿಸಲಾಗಿದೆ. ಇದೇ ಪ್ರಕರಣದಲ್ಲಿ ಧನುಷ್ ಪರಾರಿಯಾಗಿದ್ದಾನೆ.

ದೂರುದಾರ ಯೋಗೀಶ್ ಕುಮಾರ್ (42) ಅವರು ಕಳೆದ 8 ವರ್ಷಗಳಿಂದ ಸಾಸ್ತಾನ ಟೋಲ್ ಪ್ಲಾಜಾದಲ್ಲಿ ಅಸಿಸ್ಟಂಟ್ ಟೋಲ್ ಪ್ಲಾಜಾ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮಾರ್ಚ್ 24, 2026ರಂದು ರಾತ್ರಿ ಸುಮಾರು 8 ಗಂಟೆ ವೇಳೆಗೆ ಅವರು ಕರ್ತವ್ಯದಲ್ಲಿದ್ದಾಗ ಈ ಘಟನೆ ನಡೆದಿದೆ.

ಉಡುಪಿ ಕಡೆಯಿಂದ ಕುಂದಾಪುರದತ್ತ ಸಾಗುತ್ತಿದ್ದ ಬಸ್ ಟೋಲ್ ಶುಲ್ಕ ಪಾವತಿಸುತ್ತಿದ್ದ ವೇಳೆ ಅದರ ಹಿಂದೆ KA-54-6555 ಸಂಖ್ಯೆಯ ಹೋಂಡಾ ಅಮೇಜ್ ಕಾರು ಬಂದು ನಿಂತಿತ್ತು. ಕಾರಿನಲ್ಲಿ ಮೂವರು ಇದ್ದರು. ಈ ವೇಳೆ ಕಾರಿನಲ್ಲಿದ್ದ ವೆಂಕಟೇಶ್ ಪ್ರಸಾದ್ ಎಂಬಾತನು ವಾಹನದಿಂದ ಇಳಿದು ಟೋಲ್ ಸಿಬ್ಬಂದಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿ, “ಯಾಕೆ ಲೇಟ್ ಮಾಡುತ್ತೀರಾ?” ಎಂದು ಪ್ರಶ್ನಿಸಿ ಟೋಲ್ ಬ್ಯಾರಿಯರ್‌ಗೆ ಲಾತೆ ಹೊಡೆದು ಸಿಬ್ಬಂದಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ.
ಅಲ್ಲದೆ, ಸಿಬ್ಬಂದಿಗಳನ್ನು ದೂಡಿ ಹಲ್ಲೆಗೆ ಯತ್ನಿಸಿದ್ದಾನೆ. ಈ ನಡುವೆ ಮತ್ತೊಬ್ಬ ಆರೋಪಿಯಾದ ವಿನಾಯಕ್ ಕಾರಿನಿಂದ ಕಬ್ಬಿಣದ ರಾಡ್ ತೆಗೆದುಕೊಂಡು ಬಂದು ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾನೆ. ಆತನ ದಾಳಿಯಿಂದ ತಪ್ಪಿಸಿಕೊಳ್ಳಲು ಸಿಬ್ಬಂದಿಗಳು ಹರಸಾಹಸ ಪಟ್ಟಿದ್ದು, ಸಮಯಕ್ಕೆ ತಪ್ಪಿಸಿಕೊಂಡಿದ್ದಾರೆ. ಒಂದು ವೇಳೆ ತಪ್ಪಿಸಿಕೊಳ್ಳದಿದ್ದರೆ ಗಂಭೀರ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು ಎಂದು ಪೊಲೀಸ್ ವರದಿ ತಿಳಿಸಿದೆ.

ಸ್ಥಳದಲ್ಲಿದ್ದ ಯೋಗೀಶ್ ಕುಮಾರ್ ತಕ್ಷಣ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ಯತ್ನಿಸಿದ್ದಾರೆ. ಇದೇ ವೇಳೆ ಕಾರಿನ ಚಾಲಕರಾಗಿದ್ದ ಧನುಷ್ ಆರೋಪಿಗಳನ್ನು ಅಲ್ಲೇ ಬಿಟ್ಟು ಕಾರಿನೊಂದಿಗೆ ಪರಾರಿಯಾಗಿದ್ದಾನೆ.

ಈ ಕುರಿತು ನೀಡಿದ ದೂರಿನ ಮೇರೆಗೆ ಕೋಟಾ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 47/2026 ದಾಖಲಿಸಲಾಗಿದ್ದು, ಭಾರತೀಯ ನ್ಯಾಯ ಸಂಹಿತೆ (BNS) ಕಲಂ 115(2), 352, 110 ಜೊತೆಗೆ 3(5) ಅಡಿ ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರಕರಣದ ತನಿಖೆಯನ್ನು ಮುಂದುವರಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

13 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

13 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

19 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

2 days ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

2 days ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 days ago