Headlines

ಅಂದಾಸುರ ಬಳಿಯಲ್ಲಿ ಕಾರು-ಬೈಕ್ ನಡುವೆ ಭೀಕರ ಅಪಘಾತ : ಯುವಕ ಸ್ಥಳದಲ್ಲೇ ಸಾವು

JPEG 20260320 155238 5403948551843199035.jpg

A 26-year-old man died on the spot after a fatal car and bike collision near Koralikoppa railway gate in Anandapura, Sagar taluk of Shivamogga district. Police have registered a case and begun investigation.

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದಲ್ಲಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ಮೃತರನ್ನು ಬೀಸಿನಗದ್ದೆ ಗ್ರಾಮದ ಮಹೇಶ್ (26) ಎಂದು ಗುರುತಿಸಲಾಗಿದೆ.

ಘಟನೆ ಆನಂದಪುರದ ಸಮೀಪದ ಕೊರಲಿಕೊಪ್ಪ ರೈಲ್ವೆ ಗೇಟ್ ಬಳಿ ನಡೆದಿದೆ. ಮಹೇಶ್ ಅವರು ಬೈಕ್‌ನಲ್ಲಿ ಸಾಗುತ್ತಿದ್ದ ವೇಳೆ ಎದುರಿನಿಂದ ಬಂದ ವ್ಯಾಗನರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆ ಹೆಚ್ಚಿದ್ದರಿಂದ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿರುವುದು ತಿಳಿದುಬಂದಿದೆ.

ಸ್ಥಳಕ್ಕೆ ಆನಂದಪುರ ಪಿಎಸೈ ಪ್ರವೀಣ್ ಎಸ್ ಪಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ.