ಗಾಂಜಾ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು – ಒಬ್ಬನ ಬಂಧನ, 2 ಕೆ ಜಿ ಗಾಂಜಾ ವಶಕ್ಕೆ

Shivamogga Doddapete police busted an illegal ganja selling network near Mount Hira School in Iliyaz Nagar, arresting one आरोपी with 2.066 kg of ganja while another suspect escaped.

ಗಾಂಜಾ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು – ಒಬ್ಬನ ಬಂಧನ, 2 ಕೆ ಜಿ ಗಾಂಜಾ ವಶಕ್ಕೆ

ಶಿವಮೊಗ್ಗ: ನಗರದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಖಚಿತ ಮಾಹಿತಿಯ ಆಧಾರದಲ್ಲಿ ದಾಳಿ ನಡೆಸಿದ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿ, ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಮಾರ್ಚ್ 1ರಂದು ಸಂಜೆ ಇಲಿಯಾಜ್ ನಗರದ ಮೌಂಟ್ ಹಿರಾ ಶಾಲೆಯ ಸಮೀಪದ ತುಂಗಾ ಚಾನಲ್ ಬಳಿ ಸ್ಕೂಟಿಯಲ್ಲಿ ಗಾಂಜಾ ಮಾರಾಟ ನಡೆಯುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಪಿಎಸ್ಐ ನಾರಾಯಣ ಮಧುಗಿರಿ ಹಾಗೂ ಸಿಬ್ಬಂದಿಗಳ ತಂಡ ಸ್ಥಳಕ್ಕೆ ತೆರಳಿ ದಾಳಿ ನಡೆಸಿದರು.

ದಾಳಿಯ ವೇಳೆ ಆರೋಪಿಗಳು ಹೊಂದಿದ್ದ ಸುಮಾರು 2 ಕೆಜಿ 66 ಗ್ರಾಂ ಒಣ ಗಾಂಜಾ ಹಾಗೂ ಗಾಂಜಾ ಸಾಗಾಟಕ್ಕೆ ಬಳಸಲಾಗಿದ್ದ ಸ್ಕೂಟಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣದಲ್ಲಿ ಸವಾಯಿಪಾಳ್ಯದ ಮೊಹಮ್ಮದ್ ಹಮ್ಮದ್ ಅಜರುದ್ದೀನ್ ಅಲಿಯಾಸ್ ಅಜರ್ (28) ಎಂಬಾತನನ್ನು ಎ1 ಆರೋಪಿಯಾಗಿ ಬಂಧಿಸಲಾಗಿದೆ. ಬಂಧಿತ ಆರೋಪಿ ವೃತ್ತಿಯಲ್ಲಿ ಬಟ್ಟೆ ವ್ಯಾಪಾರಿಯಾಗಿದ್ದು, ಸದ್ಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇನ್ನೊಬ್ಬ ಆರೋಪಿ ವಸೀಂ ಅಕ್ರಂ ಅಲಿಯಾಸ್ ಸೈಲೆಂಟ್ ದಾಳಿ ವೇಳೆ ಸ್ಥಳದಿಂದ ಪರಾರಿಯಾಗಿದ್ದು, ಆತನ ಪತ್ತೆಗಾಗಿ ಪೊಲೀಸರು ವಿಶೇಷ ತಂಡ ರಚಿಸಿ ಶೋಧ ಕಾರ್ಯ ಮುಂದುವರೆಸಿದ್ದಾರೆ.

ಬಂಧಿತ ಅಜರ್ ವಿರುದ್ಧ ಈಗಾಗಲೇ ದೊಡ್ಡಪೇಟೆ ಹಾಗೂ ತುಂಗಾನಗರ ಪೊಲೀಸ್ ಠಾಣೆಗಳಲ್ಲಿ ಕೊಲೆ ಯತ್ನ (ಸೆಕ್ಷನ್ 307), ದರೋಡೆ ಸಂಚು, ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಎನ್‌ಡಿಪಿಎಸ್ ಕಾಯ್ದೆಯಡಿ ಸೇರಿ ಒಟ್ಟು 6 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

3 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

14 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

15 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

17 hours ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

17 hours ago

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಯುವಕ ಸ್ಥಳದಲ್ಲೇ ಸಾವು

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…

20 hours ago