Headlines

ಶಿವಮೊಗ್ಗದಲ್ಲಿ ಏಕಾಏಕಿ ಹೊತ್ತಿ ಉರಿದ ಲಾರಿ

A parked goods lorry caught fire near the railway goods shed in Shivamogga early morning, likely due to a short circuit. No casualties were reported, but the vehicle was severely damaged.

ಶಿವಮೊಗ್ಗ : ನಗರದ ರೈಲ್ವೆ ಸ್ಟೇಷನ್ ಸಮೀಪದ ಗೂಡ್ಸ್ ಶೆಡ್ ಬಳಿ ನಿಲ್ಲಿಸಲಾಗಿದ್ದ ಗೂಡ್ಸ್ ಲಾರಿಯೊಂದರಲ್ಲಿ ಇಂದು ಬೆಳಗಿನ ಜಾವ ಭೀಕರ ಅಗ್ನಿ ಅವಘಡ ಸಂಭವಿಸಿದೆ.

ಇಂದು ಮುಂಜಾನೆ ಸುಮಾರು 5 ಗಂಟೆ ವೇಳೆಗೆ ಅಬಿದ್ ಅವರಿಗೆ ಸೇರಿದ ‘ಎಸ್ ಕೆ ಪಿ’ (SKP) ಲಾರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಈ ಲಾರಿಯನ್ನು ರೈಲ್ವೆ ಗೂಡ್ಸ್ ಮೂಲಕ ಬರುವ ಗೊಬ್ಬರ ಸಾಗಾಣಿಕೆಗಾಗಿ ಅಲ್ಲಿ ನಿಲ್ಲಿಸಲಾಗಿತ್ತು ಎಂದು ತಿಳಿದುಬಂದಿದೆ.

ಮೊದಲಿಗೆ ಲಾರಿಯ ಕ್ಯಾಬಿನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇದನ್ನು ಗಮನಿಸಿದ ಕ್ಲೀನರ್ ತಕ್ಷಣವೇ ಮಾಲೀಕರಿಗೆ ಮಾಹಿತಿ ನೀಡಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದಲೇ ಈ ಅಗ್ನಿ ಅವಘಡ ಸಂಭವಿಸಿರುವ ಸಾಧ್ಯತೆ ಇದೆ.

ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಇದರಿಂದ ಪಕ್ಕದಲ್ಲಿದ್ದ ಇತರ ವಾಹನಗಳು ಹಾಗೂ ಗೂಡ್ಸ್ ಶೆಡ್‌ನಲ್ಲಿದ್ದ ಸರಕುಗಳಿಗೆ ಬೆಂಕಿ ವ್ಯಾಪಿಸುವುದನ್ನು ತಪ್ಪಿಸಲಾಗಿದೆ.

ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಲಾರಿಯ ಮುಂಭಾಗ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ ಎಂದು ತಿಳಿದುಬಂದಿದೆ.

ಈ ಘಟನೆ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಮುಂದುವರಿದಿದೆ.

About The Author

Exit mobile version