POSTMAN NEWS

ನೈಜ ಸುದ್ದಿ ನೇರ ಬಿತ್ತರ..

HOSANAGARA | ಬೈಕ್‌ನಲ್ಲಿ ಅಕ್ರಮವಾಗಿ ಶ್ರೀಗಂಧ ಸಾಗಾಣಿಕೆ : ಮೂವರ ಬಂಧನ, 28 ಕೆಜಿ ಶ್ರೀಗಂಧ ವಶಕ್ಕೆ

GridArt 20260308

Three accused were arrested by forest officials for illegally cutting and transporting sandalwood in the Haridravathi Reserve Forest area of Hosanagara taluk in Shivamogga district. Around 28 kg of sandalwood was seized from the accused.

HOSANAGARA | ಬೈಕ್‌ನಲ್ಲಿ ಅಕ್ರಮವಾಗಿ ಶ್ರೀಗಂಧ ಸಾಗಾಣಿಕೆ : ಮೂವರ ಬಂಧನ, 28 ಕೆಜಿ ಶ್ರೀಗಂಧ ವಶಕ್ಕೆ

ಹೊಸನಗರ : ಅಕ್ರಮವಾಗಿ ಶ್ರೀಗಂಧ ಮರಗಳನ್ನು ಕಡಿದು ಬೈಕ್‌ನಲ್ಲಿ ಸಾಗಾಣಿಕೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿರುವ ಘಟನೆ ತಾಲೂಕಿನ ಹರಿದ್ರಾವತಿ ಮೀಸಲು ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಹರಿದ್ರಾವತಿ ಮೀಸಲು ಅರಣ್ಯದಲ್ಲಿ ಶ್ರೀಗಂಧ ಮರಗಳನ್ನು ಕಡಿದು ಕಳ್ಳ ಸಾಗಾಣಿಕೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಶ್ರೀನಾಥ್ (27), ನವೀನ್ (25) ಹಾಗೂ ಕೀರ್ತನ್ (25) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಅಂದಾಜು 28 ಕೆ.ಜಿ. ತೂಕದ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಸಂಚಾರಿ ದಳದ ಪಿಎಸ್‌ಐ ವಿನಾಯಕ, ಹೊಸನಗರ ವಲಯ ಅರಣ್ಯಾಧಿಕಾರಿ ಅನಿಲ್ ಕುಮಾರ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಭಾಗವಹಿಸಿದ್ದರು.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.