w
Headlines
Home » ಶಿವಮೊಗ್ಗದಲ್ಲಿ ಮಾ.27ರಂದು ಉದ್ಯೋಗ ಮೇಳ: ವಿವಿಧ ಕಂಪನಿಗಳಿಂದ ನೇರ ಸಂದರ್ಶನ

ಶಿವಮೊಗ್ಗದಲ್ಲಿ ಮಾ.27ರಂದು ಉದ್ಯೋಗ ಮೇಳ: ವಿವಿಧ ಕಂಪನಿಗಳಿಂದ ನೇರ ಸಂದರ್ಶನ

GridArt 20260323

District Employment Exchange Shivamogga to host job fair on March 27 with direct interviews by leading companies. Eligible candidates can attend for free.

ಶಿವಮೊಗ್ಗ : ಜಿಲ್ಲೆಯಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶವಾಗಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾರ್ಚ್ 27ರಂದು ಬೆಳಗ್ಗೆ 11 ಗಂಟೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಶಿವಮೊಗ್ಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಆವರಣದಲ್ಲಿ ನಡೆಯಲಿರುವ ಈ ಮೇಳದಲ್ಲಿ ಖ್ಯಾತ ಸಂಸ್ಥೆಗಳಾದ ಶಾಹಿ ಎಕ್ಸ್ಪೋರ್ಟ್, ಅಪೋಲೋ ಫಾರ್ಮಸಿ ಹಾಗೂ ಮಹಾಂತ್ ಮೋಟಾರ್ಸ್ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿವೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮೋ ಮತ್ತು ಇತರೆ ಪದವಿ ತೇರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಈ ಮೇಳದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳು ತಮ್ಮ ಬಯೋಡೆಟಾ ಹಾಗೂ ಆಧಾರ್ ಕಾರ್ಡ್ ಪ್ರತಿಯನ್ನು ಕಡ್ಡಾಯವಾಗಿ ತರಬೇಕಾಗಿದ್ದು, ಮೇಳಕ್ಕೆ ಉಚಿತ ಪ್ರವೇಶ ಕಲ್ಪಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಪಂಪನಗರ, ಸಾಗರ ರಸ್ತೆ, ಶಿವಮೊಗ್ಗ ಕಚೇರಿಯನ್ನು ನೇರವಾಗಿ ಸಂಪರ್ಕಿಸಬಹುದಾಗಿದ್ದು, 9380663606 / 9108235132 ಮೊಬೈಲ್ ಸಂಖ್ಯೆಗಳ ಮೂಲಕವೂ ಮಾಹಿತಿ ಪಡೆಯಬಹುದಾಗಿದೆ ಎಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.