District Employment Exchange Shivamogga to host job fair on March 27 with direct interviews by leading companies. Eligible candidates can attend for free.
ಶಿವಮೊಗ್ಗ : ಜಿಲ್ಲೆಯಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶವಾಗಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾರ್ಚ್ 27ರಂದು ಬೆಳಗ್ಗೆ 11 ಗಂಟೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಶಿವಮೊಗ್ಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಆವರಣದಲ್ಲಿ ನಡೆಯಲಿರುವ ಈ ಮೇಳದಲ್ಲಿ ಖ್ಯಾತ ಸಂಸ್ಥೆಗಳಾದ ಶಾಹಿ ಎಕ್ಸ್ಪೋರ್ಟ್, ಅಪೋಲೋ ಫಾರ್ಮಸಿ ಹಾಗೂ ಮಹಾಂತ್ ಮೋಟಾರ್ಸ್ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿವೆ.
ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮೋ ಮತ್ತು ಇತರೆ ಪದವಿ ತೇರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಈ ಮೇಳದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳು ತಮ್ಮ ಬಯೋಡೆಟಾ ಹಾಗೂ ಆಧಾರ್ ಕಾರ್ಡ್ ಪ್ರತಿಯನ್ನು ಕಡ್ಡಾಯವಾಗಿ ತರಬೇಕಾಗಿದ್ದು, ಮೇಳಕ್ಕೆ ಉಚಿತ ಪ್ರವೇಶ ಕಲ್ಪಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಪಂಪನಗರ, ಸಾಗರ ರಸ್ತೆ, ಶಿವಮೊಗ್ಗ ಕಚೇರಿಯನ್ನು ನೇರವಾಗಿ ಸಂಪರ್ಕಿಸಬಹುದಾಗಿದ್ದು, 9380663606 / 9108235132 ಮೊಬೈಲ್ ಸಂಖ್ಯೆಗಳ ಮೂಲಕವೂ ಮಾಹಿತಿ ಪಡೆಯಬಹುದಾಗಿದೆ ಎಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…
ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…
ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…
ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…
ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…
ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…