w
Headlines
Home » ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ: ವೈದ್ಯಕೀಯ ವಿದ್ಯಾರ್ಥಿನಿ ಸಾವು , ಮತ್ತೊರ್ವಳ ಸ್ಥಿತಿ ಗಂಭೀರ!

ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ: ವೈದ್ಯಕೀಯ ವಿದ್ಯಾರ್ಥಿನಿ ಸಾವು , ಮತ್ತೊರ್ವಳ ಸ್ಥಿತಿ ಗಂಭೀರ!

GridArt 20260313

A tragic accident occurred inside the Meggan Hospital campus in Shivamogga where a water tanker collided with a Jupiter scooter, killing pediatric PG student Lavanya (25) from Karkala and injuring another medical student.

ಶಿವಮೊಗ್ಗ : ನಗರದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೆಡಿಕಲ್ ಕಾಲೇಜಿನ ಪಿಡಿಯಾಟ್ರಿಕ್ ಪಿ.ಜಿ ವಿದ್ಯಾರ್ಥಿನಿಯೊಬ್ಬರು ದುರ್ಘಟನೆಯಲ್ಲಿ ಸಾವನ್ನಪ್ಪಿದ್ದು, ಇನ್ನೊಬ್ಬ ವಿದ್ಯಾರ್ಥಿನಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳಾ ಗ್ರಾಮದ ನಿವಾಸಿ ಲಾವಣ್ಯ (25) ಎಂದು ಗುರುತಿಸಲಾಗಿದೆ. ಅವರು ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಪಿಡಿಯಾಟ್ರಿಕ್ ವಿಭಾಗದಲ್ಲಿ ಮೊದಲ ವರ್ಷದ ಪಿಜಿ ವ್ಯಾಸಂಗ ಮಾಡುತ್ತಿದ್ದರು. ಲಾವಣ್ಯ ಅವರು ಕಾರ್ಕಳ ಮೂಲದ ಸತೀಶ್ ಮತ್ತು ಸುನೀತಾ ದಂಪತಿಯ ಪುತ್ರಿಯಾಗಿದ್ದಾರೆ.

ಘಟನೆಯ ವಿವರದ ಪ್ರಕಾರ, ಲಾವಣ್ಯ ಹಾಗೂ ಅವರ ಸ್ನೇಹಿತೆ ಓವೇರಿಯಾ ಅವರು ಜುಪಿಟರ್ ಸ್ಕೂಟಿಯಲ್ಲಿ ಮೆಗ್ಗಾನ್ ಆಸ್ಪತ್ರೆಯಿಂದ ಹಾಸ್ಟೆಲ್ ಕಡೆಗೆ ತೆರಳುತ್ತಿದ್ದಾಗ, ಆಸ್ಪತ್ರೆ ಆವರಣದಲ್ಲಿ ಕಟ್ಟಡ ಕಾಮಗಾರಿಗೆ ನೀರು ಸರಬರಾಜು ಮಾಡುತ್ತಿದ್ದ ವಾಟರ್ ಟ್ಯಾಂಕರ್ ಜೊತೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಅಪಘಾತದ ಪರಿಣಾಮವಾಗಿ ಲಾವಣ್ಯ ಅವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇನ್ನೊಂದೆಡೆ, ಬೆಂಗಳೂರಿನ ಜೆಪಿ ನಗರ ಮೂಲದ ಹಾಗೂ ಅಂತಿಮ ವರ್ಷದ ಎಂಡಿ ವ್ಯಾಸಂಗ ಮಾಡುತ್ತಿದ್ದ ಓವೇರಿಯಾ ಅವರಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದಲ್ಲಿ ಮೃತಪಟ್ಟ ಲಾವಣ್ಯ ಅವರ ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗದ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.