ಮಹಿಳೆಯೊಬ್ಬರ ಖಾಸಗಿ ವೀಡಿಯೋ ಫೇಸ್‌ಬುಕ್ ನಲ್ಲಿ ಅಪ್‌ಲೋಡ್ : ಮಹಿಳೆ ಸೇರಿದಂತೆ ಇಬ್ಬರ ಬಂಧನ

Shivamogga CEN police arrested two accused for allegedly stealing a woman’s private video and uploading it on Facebook using a fake ID named “Shylaja SMG” in Ripponpete police station limits.

ಮಹಿಳೆಯೊಬ್ಬರ ಖಾಸಗಿ ವೀಡೀಯೋ ಫೇಸ್‌ಬುಕ್ ನಲ್ಲಿ ಅಪ್‌ಲೋಡ್ : ಮಹಿಳೆ ಸೇರಿದಂತೆ ಇಬ್ಬರ ಬಂಧನ

ಶಿವಮೊಗ್ಗ : ಮಹಿಳೆಯೊಬ್ಬರ ಖಾಸಗಿ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಪ್ರಕರಣವನ್ನು ಶಿವಮೊಗ್ಗ ಸೈಬರ್ ಅಪರಾಧ ಪೊಲೀಸರು ಭೇದಿಸಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.

ಬಂಧಿತರನ್ನು ಹೊಸನಗರ ನಿವಾಸಿ ಸೀಮಾ ಕಿರಣ್ ಹಾಗೂ ಬೆಂಗಳೂರಿನ ನಿಶಾಂತ್ ಎಂದು ಗುರುತಿಸಲಾಗಿದೆ. ಇವರ ವಿರುದ್ಧ ಶಿವಮೊಗ್ಗದ ಸೆನ್ (ಸೈಬರ್ ಕ್ರೈಂ) ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಶಿವಮೊಗ್ಗದ ಸೆನ್ (ಸೈಬರ್ ಕ್ರೈಂ) ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಲಭ್ಯವಾದ ಮಾಹಿತಿಯ ಪ್ರಕಾರ, ರಿಪ್ಪನ್‌ಪೇಟೆ ಠಾಣೆ ವ್ಯಾಪ್ತಿಯ ಮಹಿಳೆಯೊಬ್ಬರ ಖಾಸಗಿ ವೀಡಿಯೋವನ್ನು ಅವರ ಅರಿವಿಗೆ ಬಾರದಂತೆ ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನಲ್ಲಿ “Shylaja SMG” ಎಂಬ ನಕಲಿ ಐಡಿಯನ್ನು ಸೃಷ್ಟಿಸಿ ಅದರಲ್ಲಿ ವೀಡಿಯೋವನ್ನು ಅಪ್‌ಲೋಡ್ ಮಾಡಲಾಗಿತ್ತು. ಈ ಮೂಲಕ ಮಹಿಳೆಯ ಮಾನಹಾನಿ ಮಾಡುವ ಉದ್ದೇಶದಿಂದ ಆರೋಪಿಗಳು ಈ ಕೃತ್ಯ ಎಸಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ತಿಳಿದುಬಂದಿದೆ.

ಈ ವಿಷಯ ತಿಳಿದ ಮಹಿಳೆ ಸಂಬಂಧಪಟ್ಟ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಸೈಬರ್ ತಂತ್ರಜ್ಞಾನ ಸಹಾಯದಿಂದ ಆರೋಪಿಗಳ ಪತ್ತೆಗೆ ಮುಂದಾಗಿದ್ದರು. ತನಿಖೆಯ ವೇಳೆ ನಕಲಿ ಐಡಿ ಬಳಸಿ ವೀಡಿಯೋ ಹರಿಬಿಟ್ಟಿರುವುದು ಪತ್ತೆಯಾಗಿದ್ದು, ಆರೋಪಿಗಳ ಸುಳಿವು ದೊರೆತ ಹಿನ್ನೆಲೆ ಇಬ್ಬರನ್ನೂ ಬಂಧಿಸಲಾಗಿದೆ.

ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣ ಸಂಬಂಧ ಇನ್ನಷ್ಟು ವಿಚಾರಣೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆ ಸಾಮಾಜಿಕ ಜಾಲತಾಣಗಳನ್ನು ದುರುಪಯೋಗಪಡಿಸಿಕೊಂಡು ಖಾಸಗಿ ಮಾಹಿತಿಯನ್ನು ಹರಿಬಿಡುವ ಅಪಾಯಗಳ ಬಗ್ಗೆ ಮತ್ತೆ ಒಂದು ಬಾರಿ ಎಚ್ಚರಿಕೆ ನೀಡುವಂತಾಗಿದೆ. ಇಂತಹ ಪ್ರಕರಣಗಳಲ್ಲಿ ಕಾನೂನು ಕ್ರಮ ಕಠಿಣವಾಗಿದ್ದು, ಅಪರಾಧಿಗಳು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

2 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

4 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

16 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

16 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

18 hours ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

19 hours ago