w
Headlines
Home » ಕಾಲೇಜು ಉಪನ್ಯಾಸಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ : ಪ್ರತಿಭಟನೆ, ಕಠಿಣ ಕ್ರಮಕ್ಕೆ ಆಗ್ರಹ

ಕಾಲೇಜು ಉಪನ್ಯಾಸಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ : ಪ್ರತಿಭಟನೆ, ಕಠಿಣ ಕ್ರಮಕ್ಕೆ ಆಗ್ರಹ

GridArt 20260323

NSUI protests in Shivamogga demanding strict action against a Sahyadri College professor accused of sexually harassing female students and sending obscene messages.

ಶಿವಮೊಗ್ಗ: ವಿದ್ಯಾರ್ಥಿನಿಯರಿಗೆ ಆಂತರಿಕ ಪರೀಕ್ಷೆಯಲ್ಲಿ ಅಂಕ ನೀಡುವ ಹೆಸರಿನಲ್ಲಿ ಲೈಂಗಿಕವಾಗಿ ಸಹಕರಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿರುವ ಆರೋಪದ ಮೇಲೆ ಸಹ್ಯಾದ್ರಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಮುದುಕಪ್ಪ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಶಿವಮೊಗ್ಗ ಜಿಲ್ಲಾ ಎನ್‌ಎಸ್‌ಯುಐ ಆಗ್ರಹಿಸಿದೆ.

ಸೋಮವಾರ ಕಾಲೇಜಿನ ಎದುರು ಪ್ರತಿಭಟನೆ ನಡೆಸಿದ ಎನ್‌ಎಸ್‌ಯುಐ ಕಾರ್ಯಕರ್ತರು, ಉಪನ್ಯಾಸಕರಾಗಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸಬೇಕಾದ ವ್ಯಕ್ತಿ ತನ್ನ ವೈಯಕ್ತಿಕ ಲೈಂಗಿಕ ಆಸೆಗಳನ್ನು ತೀರಿಸಿಕೊಳ್ಳಲು ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿರುವುದು ಅತ್ಯಂತ ಖಂಡನೀಯ ಎಂದರು. ಈ ಕುರಿತು ನೊಂದ ವಿದ್ಯಾರ್ಥಿನಿಯರು ಕಾಲೇಜು ಪ್ರಾಂಶುಪಾಲರಿಗೆ ದೂರು ನೀಡಿದರೂ ಯಾವುದೇ ಕಠಿಣ ಕ್ರಮ ಕೈಗೊಳ್ಳದೇ ಕೇವಲ ತಿಳುವಳಿಕೆ ಪತ್ರ ನೀಡಿ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಲಾಗುತ್ತಿದೆ ಎಂದು ಆರೋಪಿಸಿದರು.

ಇಂತಹ ಘಟನೆಗಳು ಸಹ್ಯಾದ್ರಿ ಕಾಲೇಜಿನಲ್ಲಿ ಮರುಕಳಿಸುತ್ತಿರುವುದಕ್ಕೆ ಆತಂಕ ವ್ಯಕ್ತಪಡಿಸಿದ ಕಾರ್ಯಕರ್ತರು, ನಂತರ ಕುಲಸಚಿವರನ್ನು ಸಂಪರ್ಕಿಸಿ ವಿವರಗಳನ್ನು ನೀಡಲಾಗಿದ್ದು, ಕ್ರಮ ಕೈಗೊಳ್ಳುವ ಭರವಸೆ ನೀಡಿದರೂ ಇದುವರೆಗೆ ಯಾವುದೇ ಕ್ರಮ ಜರುಗಿಸದಿರುವುದು ಅನುಮಾನಗಳಿಗೆ ಕಾರಣವಾಗಿದೆ ಎಂದು ಹೇಳಿದರು.

ತಕ್ಷಣವೇ ಕುಲಪತಿಗಳು ಪ್ರಕರಣದಲ್ಲಿ ಆರೋಪಿಯಾಗಿರುವ ಪ್ರೊ. ಮುದುಕಪ್ಪರನ್ನು ಸೇವೆಯಿಂದ ವಜಾಗೊಳಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಎನ್‌ಎಸ್‌ಯುಐ ವತಿಯಿಂದ ವಿಶ್ವವಿದ್ಯಾಲಯ ಬಂದ್ ಸೇರಿದಂತೆ ತೀವ್ರ ಹೋರಾಟ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಈ ಪ್ರತಿಭಟನೆಯಲ್ಲಿ ಎನ್ ಎಸ್ ಯು ಐ ಜಿಲ್ಲಾಧ್ಯಕ್ಷ  ವಿಜಯಕುಮಾರ್, ರಾಜ್ಯ ಕಾರ್ಯದರ್ಶಿ ಬಾಲಾಜಿ ಹೆಚ್‌ಎಸ್,  ನಗರಾಧ್ಯಕ್ಷರಾದ ರವಿಕುಮಾರ್, ಚಂದ್ರೋಜಿ ರಾವ್, ಆದಿತ್ಯ, ಸುಭಾನ್, ಅಭಿಷೇಕ್ ಅನುಪಿನ ಕಟ್ಟೆ, ಪ್ರಜ್ವಲ್, ಶ್ರೀಕಾಂತ್, ಕಿಸನ್, ಯೂಸಫ್, ಸಾದುಲ್ಲ, ಅಭಿಷೇಕ್, ಪ್ರಭು, ಶ್ರೇಯಸ್, ಕುಮಾರ್ ಇನ್ನೂ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.