ಶಾಲಾ ಬಸ್ ಡಿಕ್ಕಿಯಾಗಿ ಒಂದೂವರೆ ವರ್ಷದ ಮಗು ಸಾವು – ಶಿವಮೊಗ್ಗದಲ್ಲೊಂದು ದಾರುಣ ಘಟನೆ
A tragic accident in Shivamogga where a 1.5-year-old child lost life after being hit by a school bus. Police have registered a case and investigation is underway.
ಶಿವಮೊಗ್ಗ: ನಗರದ ಗೋಪಾಲಗೌಡ ಬಡಾವಣೆಯಲ್ಲಿ ಶಾಲಾ ಬಸ್ ಡಿಕ್ಕಿ ಹೊಡೆದ ಪರಿಣಾಮ ಒಂದೂವರೆ ವರ್ಷದ ಮಗು ಮೃತಪಟ್ಟಿರುವ ದಾರುಣ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಮೃತ ಮಗುವನ್ನು ಗೋಪಾಲಗೌಡ ಬಡಾವಣೆಯ ನಿವಾಸಿ ಮಂಜುನಾಥ್ ಅವರ ಪುತ್ರ ಆರ್ಯನ್ (1 ವರ್ಷ 6 ತಿಂಗಳು) ಎಂದು ಗುರುತಿಸಲಾಗಿದೆ.
ಮಾಹಿತಿ ಪ್ರಕಾರ, ಮಂಜುನಾಥ್ ಅವರ ಎರಡನೇ ಮಗ ಆರುಷ್ ಖಾಸಗಿ ಶಾಲೆಯಲ್ಲಿ ಎಲ್‌ಕೆಜಿ ವ್ಯಾಸಂಗ ಮಾಡುತ್ತಿದ್ದು, ಮಧ್ಯಾಹ್ನ ಶಾಲಾ ಬಸ್ ಮೂಲಕ ಮನೆಗೆ ಬಂದಿದ್ದನು.
ಆರುಷ್‌ನನ್ನು ಕರೆತರಲು ಮನೆಯ ಕೆಲಸದ ಮಹಿಳೆ ಆಶಾ ಅವರು ಬಸ್ ಬಳಿಗೆ ತೆರಳಿದ್ದರು. ಈ ವೇಳೆ ಅವರ ಹಿಂದೆಯೇ ಆರ್ಯನ್ ಕೂಡ ರಸ್ತೆಗೆ ಬಂದಿದ್ದಾನೆ. ಆಶಾ ಅವರು ಆರುಷ್‌ನನ್ನು ಬಸ್ಸಿನಿಂದ ಇಳಿಸುತ್ತಿದ್ದ ಸಂದರ್ಭದಲ್ಲಿ, ಆರ್ಯನ್ ಬಸ್‌ನ ಮುಂಭಾಗದಿಂದ ರಸ್ತೆ ದಾಟಲು ಮುಂದಾಗಿದ್ದನು.
ಈ ಸಂದರ್ಭದಲ್ಲಿ ಮಗುವಿನ ಇರುವಿಕೆ ಗಮನಿಸದ ಬಸ್ ಚಾಲಕ ಉಮೇಶ್ ಅಜಾಗರೂಕತೆಯಿಂದ ಬಸ್ ಚಲಾಯಿಸಿದ ಪರಿಣಾಮ ಮಗುವಿಗೆ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ. ತಕ್ಷಣ ಮಗುವನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ.
ಘಟನೆಯ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…