POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಶಾದಿಮಹಲ್‌ಗಳಲ್ಲಿ ಕಳ್ಳತನ ಮಾಡುತ್ತಿದ್ದ ಮಹಿಳೆ ಪೊಲೀಸರ ಬಲೆಗೆ – 18 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

JPEG 20260309 215843

Tunganagar police in Shivamogga arrested a woman accused of stealing gold ornaments and cash during wedding functions at Shadi Mahals. Police recovered 120 grams of gold worth around ₹18 lakh in connection with four cases.

ಶಿವಮೊಗ್ಗ: ನಗರದ ವಿವಿಧ ಶಾದಿಮಹಲ್‌ಗಳಲ್ಲಿ ಮದುವೆ ಸಮಾರಂಭಗಳ ವೇಳೆ ಆಭರಣ ಹಾಗೂ ನಗದು ಕಳ್ಳತನ ಮಾಡುತ್ತಿದ್ದ ಮಹಿಳೆಯನ್ನು ತುಂಗಾನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸೂಳೆಬೈಲ್ ನಿವಾಸಿ ರುಕ್ಸಾರ್ ಫಿರ್ದೋಸ್ (30),  ಬಂಧಿತ ಆರೋಪಿಯಾಗಿದ್ದಾಳೆ. ಈಕೆ ಮದುವೆ ಕಾರ್ಯಕ್ರಮಗಳಲ್ಲಿ ಜನಸಂದಣಿಯನ್ನು ಬಳಸಿಕೊಂಡು ಅತಿಥಿಗಳ ಆಭರಣ ಹಾಗೂ ನಗದು ಕಳವು ಮಾಡುತ್ತಿದ್ದಳೆಂದು ತಿಳಿದುಬಂದಿದೆ.

ತುಂಗಾನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ನಾಲ್ಕು ಪ್ರಕರಣಗಳ ಸಂಬಂಧ ತನಿಖೆ ನಡೆಸಿದ ವೇಳೆ ಆರೋಪಿಯನ್ನು ಬಂಧಿಸಿ, ಆಕೆಯಿಂದ ಒಟ್ಟು ಸುಮಾರು 18 ಲಕ್ಷ ರೂ. ಮೌಲ್ಯದ 120 ಗ್ರಾಂ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಡಿ.ವೈ.ಎಸ್.ಪಿ ಬಾಬು ಅಂಜನಪ್ಪ ಅವರ ಮಾರ್ಗದರ್ಶನದಲ್ಲಿ, ತುಂಗಾನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಕೆ.ಟಿ. ಗುರುರಾಜ್ ಹಾಗೂ ಎಸ್‌ಐ ಗಾದಿಲಿಂಗಪ್ಪ ಗೌಡರ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಹೆಚ್‌ಸಿ ಕಿರಣ್ ಮೋರೆ, ಅರುಣ್ ಕುಮಾರ್, ಶೋಭಾರಾಣಿ ಮತ್ತು ಪಿಸಿ ನಾಗಪ್ಪ ಅಡಿವೆಪ್ಪನವರ್, ಹರೀಶ್ ನಾಯ್ಕ, ಹರೀಶ್, ರಂಗನಾಥ್, ತಮ್ಮಣ್ಣ ಜಂಬಗಿ ಸೇರಿದಂತೆ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.