ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಗಾಜುಗಳನ್ನು ಪುಡಿ ಮಾಡಿದ ಕಿಡಿಗೇಡಿಗಳು

Miscreants vandalized a newly purchased Swift car by smashing its front and rear windows in Sharavathi Nagar, Shivamogga. The entire act was captured on CCTV, and a case has been registered at Doddapete Police Station.

ಶಿವಮೊಗ್ಗ: ಶರಾವತಿ ನಗರದ ಹಂದಿ ಗೊಲ್ಲರ ಕ್ಯಾಂಪ್​​ನಲ್ಲಿ ತಡರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಗಾಜುಗಳನ್ನು ಕಿಡಿಗೇಡಿಗಳಿಬ್ಬರು ಪುಡಿ ಪುಡಿ ಮಾಡಿ ಕಾರನ್ನು ಜಖಂಗೊಳಿಸಿದ್ದಾರೆ. ಕಿಡಿಗೇಡಿಗಳ‌ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಶರಾವತಿ ನಗರದ ಲೋಕೇಶ್ ಅವರು ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಹೊಸ ಸ್ವಿಫ್ಟ್ ಕಾರನ್ನು ಖರೀದಿಸಿದ್ದರು. ಲೋಕೇಶ್ ಅವರ ಅಕ್ಕನ ಅನಾರೋಗ್ಯ ಸಂಬಂಧ ಆಗಾಗ್ಗೆ ಮಣಿಪಾಲ್​​ಗೆ ಹೋಗಬೇಕಾದ ಅನಿವಾರ್ಯತೆಗೆ ಕಾರನ್ನು ಖರೀದಿಸಿದ್ದರು. ತಮ್ಮ ಮನೆಯ ಮುಂದೆ ಒಂದು ಶೆಡ್ ಅನ್ನು ಮಾಡಿ ಅದರಲ್ಲಿ ಮೂರು ಸಿಸಿ ಕ್ಯಾಮರಾಗಳನ್ನು ಅಳವಡಿಸಿದ್ದರು. ಕಿಡಿಗೇಡಿಗಳಿಬ್ಬರು ಹೊಸಮನೆ ಕಡೆಯಿಂದ ಬೈಕ್​​ನಲ್ಲಿ ಬಂದು ಬೈಕ್​​ ಅನ್ನು ದೂರದಲ್ಲಿ ನಿಲ್ಲಿಸಿದ್ದು, ಇದರಲ್ಲಿ‌ ಓರ್ವ ಮಾತ್ರ ಕಾರಿನ ಬಳಿ ಬಂದು ಕಬ್ಬಿಣದ ವಸ್ತುವಿಂದ ಕಾರಿನ ಹಿಂದಿನ ಹಾಗೂ ಮುಂದಿನ ಗಾಜನ್ನು ಪುಡಿ ಮಾಡಿದ್ದಾನೆ. ನಂತರ ಕಾರಿನ ಡೋರ್ ಜಖಂ ಮಾಡಿದ್ದಾರೆ.

ಕಾರನ್ನು ಜಖಂ ಮಾಡಿದ ನಂತರ ಕಿಡಿಗೇಡಿಗಳು ಪರಾರಿಯಾಗಿದ್ದಾರೆ.ವಿಷಯ ತಿಳಿಯುತ್ತಿದ್ದಂತೆಯೇ ಕಾರಿನ ಮಾಲೀಕರು ಬಂದು ನೋಡಿದಾಗ ಕಾರಿನ ಗಾಜು ಪುಡಿ ಪುಡಿಯಾಗಿತ್ತು.‌ ತಕ್ಷಣ ದೊಡ್ಡಪೇಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಸ್ಥಳ ಮಹಜರು ನಡೆಸಿದ್ದಾರೆ. ಕಾರನ್ನು ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಲಾಗಿದೆ. ಈ ಕುರಿತು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಕುರಿತು ಲೋಕೇಶ್ ಮಾತನಾಡಿ, ನಿನ್ನೆ‌ 11:45ರ ಸುಮಾರಿಗೆ ಇಬ್ಬರು ಬೈಕ್​​ನಲ್ಲಿ ಬಂದಿದ್ದಾರೆ. ಇದರಲ್ಲಿ ಓರ್ವ ಕಾರಿನ ಬಳಿ ಬಂದು ಮಚ್ಚಿನ ರೀತಿಯಲ್ಲಿರುವ ಕಬ್ಬಿಣದ ವಸ್ತುವಿನಿಂದ ಕಾರಿನ ಹಿಂದಿನ ಹಾಗೂ ಮುಂದಿನ ಗಾಜುಗಳನ್ನು ಪುಡಿ ಮಾಡಿದ್ದಾರೆ. ನಮ್ಮ ಕಾರಿನ ಗಾಜು ಪುಡಿ ಪುಡಿ ಮಾಡಿದವನು ಗಾಂಜಾ ಅಮಲಿನಲ್ಲಿ ಮಾಡಿದನೋ ಅಥವಾ ಬೇರೆ ಯಾವ ದೃಷ್ಟಿಯಿಂದ ಮಾಡದನೋ ಗೂತ್ತಿಲ್ಲ. ಆದರೆ ಯಾರೇ ಕಾರಿನ ಗಾಜು ಪುಡಿ ಮಾಡಿ, ಕಾರನ್ನು ಜಖಂ ಮಾಡಿದ್ದರೂ ಅವರನ್ನು ಹಿಡಿದು ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

5 hours ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

18 hours ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

18 hours ago

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…

18 hours ago

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ. ಭಾನುಪ್ರಕಾಶ್ ಕರೆ

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…

20 hours ago

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…

24 hours ago