ಮಾದ್ಲಾರದಿಂಬದಲ್ಲಿ ಶ್ರೀ ಕೋದಂಡರಾಮ ದೇವರ ಪುನರ್ ಪ್ರತಿಷ್ಠಾಪನೆ – ಧಾರ್ಮಿಕ ಸಮಾರಂಭದಲ್ಲಿ ಸ್ವಾಮೀಜಿ ಆಶೀರ್ವಚನ

Sri Nadamayananda Nath Swamiji delivered a spiritual message during the inauguration and re-consecration ceremony of the newly built Sri Kodandarama Temple at Madlaradimba near Ripponpet, constructed at a cost of ₹50 lakh.

ಮಾದ್ಲಾರದಿಂಬದಲ್ಲಿ ಶ್ರೀ ಕೋದಂಡರಾಮ ದೇವರ ಪುನರ್ ಪ್ರತಿಷ್ಠಾಪನೆ – ಧಾರ್ಮಿಕ ಸಮಾರಂಭದಲ್ಲಿ ಸ್ವಾಮೀಜಿ ಆಶೀರ್ವಚನ

ರಿಪ್ಪನ್‌ಪೇಟೆ: ಸನ್ಯಾಸಿಗಳಿಗೆ ದೀಕ್ಷೆಯ ಸಂದರ್ಭದಲ್ಲಿ ಕೇಸರಿ ವಸ್ತ್ರವನ್ನು ನೀಡುವ ಮೂಲಕ ಅವರೊಳಗಿನ ದುಷ್ಟಶಕ್ತಿಯನ್ನು ನಿಯಂತ್ರಿಸುವ ಸಂಕೇತವನ್ನು ವ್ಯಕ್ತಪಡಿಸಲಾಗುತ್ತದೆ ಎಂದು ಶಿವಮೊಗ್ಗ ಅಧಿಚುಂಚನಗಿರಿ ಶಾಖಾ ಮಠದ ಶ್ರೀ ನಾದಮಯಾನಂದನಾಥ ಸ್ವಾಮೀಜಿ ಹೇಳಿದರು.

ರಿಪ್ಪನ್‌ಪೇಟೆ ಸಮೀಪದ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾದ್ಲಾರದಿಂಬದಲ್ಲಿ ಶ್ರೀರಾಮ ದೇವಸ್ಥಾನ ಸೇವಾ ಸಮಿತಿಯವರ ವತಿಯಿಂದ ಸುಮಾರು 50 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲಾದ ಶ್ರೀ ಕೋದಂಡರಾಮ ದೇವರ ದೇವಸ್ಥಾನದ ಪುನರ್ ಪ್ರತಿಷ್ಠಾಪನೆ ಹಾಗೂ ಕಟ್ಟಡದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ಜೀವನದ ಸಾರ್ಥಕತೆಗೆ ಮಠ–ಮಂದಿರಗಳು ಅಗತ್ಯವೆಂದರು.ನಮ್ಮ ಮೂಲ ಆಚರಣೆಗಳು ಮತ್ತು ಸಂಸ್ಕೃತಿಗಳನ್ನು ಅರಿತು ಅವನ್ನು ಪಾಲಿಸುವುದು ಅತ್ಯವಶ್ಯಕ. ಸಿಂಧೂರವು ಸುಮಂಗಳೆಯರಿಗೆ ಭಗವಂತ ನೀಡಿದ ಪವಿತ್ರ ಸಂಕೇತವಾಗಿದೆ. ಭಾರತ ದೇಶದ ಸನಾತನ ಪರಂಪರೆಗಳನ್ನು ಅನುಸರಿಸುವುದರಿಂದ ಅಷ್ಟಐಶ್ವರ್ಯ ಲಭಿಸುತ್ತದೆ ಎಂದು ಅವರು ಹೇಳಿದರು.

ಅಜ್ಞಾನದಿಂದ ಸುಜ್ಞಾನತ್ತ ಸಾಗುವ ದಾರಿ ತೋರಿಸುವುದೇ ನಮ್ಮ ಧರ್ಮ ಮತ್ತು ಸಂಸ್ಕಾರಗಳ ಉದ್ದೇಶವಾಗಿದೆ. ಶ್ರೀರಾಮನ ತತ್ವ ಆದರ್ಶಗಳು ಇಂದಿನ ಯುವಪೀಳಿಗೆ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ನಮ್ಮ ಪೂರ್ವಿಕರು ಪ್ರಕೃತಿಯಲ್ಲಿಯೇ ದೇವರನ್ನು ಕಂಡು ಆರಾಧನೆ ಮಾಡಿದವರು ಎಂದು ಅವರು ತಿಳಿಸಿದರು.

ಕಾರ್ಯಕ್ರಮಕ್ಕೆ ಶ್ರೀರಾಮ ದೇವಸ್ಥಾನ ಸೇವಾ ಸಮಿತಿಯ ಅಧ್ಯಕ್ಷ ಜಯಪ್ರಕಾಶ ನಾಯಕ್ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ, ಕೊಡಗೈದಾನಿ ಯಶೋಧಮ್ಮ, ಸಮಿತಿಯ ಗೌರವಾಧ್ಯಕ್ಷ ಹೆಚ್.ಎಸ್. ಕೃಷ್ಣಮೂರ್ತಿಗೌಡ್ರು, ಬಾಳೂರು ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ವೇದಾವತಿ ಬಾಲಚಂದ್ರ, ಸಮಿತಿಯ ಉಪಾಧ್ಯಕ್ಷ ಹೆಚ್.ಎಸ್. ರಾಜು, ಹೆಚ್.ಎಸ್. ರವಿಹಾಲುಗುಡ್ಡೆ, ಹೆಚ್.ಪಿ. ಪಾಲಾಕ್ಷ, ಚೂಡಾಮಣಿ ಹೆಚ್.ಎಸ್., ಪ್ರೀತಮ್, ಸಹಕಾರ ಸಂಘದ ಅಧ್ಯಕ್ಷ ಎಂ.ಎನ್. ಪರಮೇಶ್ ಹಾಗೂ ರಾಜ್ಯ ಒಕ್ಕಲಿಗ ಸಮಾಜದ ಮಹಿಳಾ ಮುಖಂಡೆ ಪ್ರತಿಮಾ ಶಿವಮೊಗ್ಗ ಸೇರಿದಂತೆ ಊರಿನ ಹಿರಿಯರು ಮತ್ತು ಸಮಾಜದ ಮುಖಂಡರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಚಿಂತು ಸ್ವಾಗತಿಸಿದರು. ಅನನ್ಯ ಮತ್ತು ಅನುಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು. ಹೆಚ್.ವಿ. ಹರೀಶ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

14 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

14 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

20 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

2 days ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

2 days ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 days ago