POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಪ್ರೇಮ ಪ್ರಕರಣದ ಬೇಸರ: ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮ*ಹತ್ಯೆ

GridArt 20260309

A 26-year-old youth, Srijith Naik from Gandralli village in Hosanagar taluk, allegedly died by suicide by hanging from a tree near his house. Family members suspect mental distress following a past love case and alcohol addiction.

ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಸಮೀಪದ ಗಂದ್ರಳ್ಳಿ ಗ್ರಾಮದಲ್ಲಿ ಯುವಕನೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಮೃತರನ್ನು ಶ್ರೀಜಿತ್ ನಾಯ್ಕ (26) ಎಂದು ಗುರುತಿಸಲಾಗಿದೆ.

ಮೃತ ಶ್ರೀಜಿತ್ ನಾಯ್ಕ ಅವರಿಗೆ ಮದ್ಯಪಾನ ಮಾಡುವ ಅಭ್ಯಾಸ ಇದ್ದು, ಸುಮಾರು ಮೂರು ವರ್ಷಗಳ ಹಿಂದೆ ಪ್ರೇಮ ಪ್ರಕರಣದ ಹಿನ್ನೆಲೆಯಲ್ಲಿ ಜೈಲಿಗೂ ಹೋಗಿ ಬಂದಿದ್ದರೆಂದು ತಿಳಿದುಬಂದಿದೆ. ಈ ಘಟನೆ ಬಳಿಕ ಅವರು ಮಾನಸಿಕವಾಗಿ ಬೇಸರಗೊಂಡು ಹೆಚ್ಚಾಗಿ ಮದ್ಯಪಾನ ಮಾಡುತ್ತಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ.

ಮಾರ್ಚ್ 7ರಂದು ರಾತ್ರಿ ಸುಮಾರು 10.30ರ ವೇಳೆ ಮನೆಗೆ ಬಂದಿದ್ದ ಶ್ರೀಜಿತ್ ಅವರಿಗೆ ಊಟ ಮಾಡಲು ತಾಯಿ ಹಾಗೂ ಸಹೋದರರು ಹೇಳಿದಾಗ, “ಊಟ ಮಾಡಿಕೊಂಡಿದ್ದೇನೆ” ಎಂದು ಹೇಳಿ ಮಲಗಿದ್ದರು. ಆದರೆ ಮಾರ್ಚ್ 8ರಂದು ಬೆಳಗ್ಗೆ ಸುಮಾರು 5.30ರ ವೇಳೆಗೆ ಅವರು ಮನೆಯಲ್ಲಿ ಕಾಣಿಸದ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಿದಾಗ, ಮನೆಯ ಮುಂದೆ ಇರುವ ಜಾಗದಲ್ಲಿ ಮರಕ್ಕೆ ಲುಂಗಿಯಿಂದ ನೇಣು ಬಿಗಿದುಕೊಂಡು ಮೃತಪಟ್ಟಿರುವುದು ಪತ್ತೆಯಾಗಿದೆ.

ಪ್ರೇಮ ಪ್ರಕರಣದಿಂದ ಮನನೊಂದು ಮತ್ತು ಮದ್ಯಪಾನದ ಪರಿಣಾಮವಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದೆ.

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.