SSLC examinations begin in Shivamogga district from March 18 to April 4 across 79 exam centres with full arrangements including CCTV surveillance, transport, and security to ensure smooth and transparent conduct of exams.
ಶಿವಮೊಗ್ಗ : ಜಿಲ್ಲೆಯಾದ್ಯಂತ ನಾಳೆ (ಮಾ.18)ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಲಿದ್ದು, ಏಪ್ರಿಲ್ 4ರವರೆಗೆ ನಡೆಯಲಿವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 79 ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ.
ಭದ್ರಾವತಿ 15, ಹೊಸನಗರ 7, ಸಾಗರ 9, ಶಿಕಾರಿಪುರ 11, ಶಿವಮೊಗ್ಗ 20, ಸೊರಬ 10 ಹಾಗೂ ತೀರ್ಥಹಳ್ಳಿ 7 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಸೂಕ್ತ ಆಸನ ವ್ಯವಸ್ಥೆ ಸೇರಿದಂತೆ ಒತ್ತಡರಹಿತ ವಾತಾವರಣ ಕಲ್ಪಿಸುವಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಪರೀಕ್ಷೆ ಪಾರದರ್ಶಕವಾಗಿ ನಡೆಯುವಂತೆ ಎಲ್ಲಾ ಕೇಂದ್ರಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ವೆಬ್ ಕಾಸ್ಟಿಂಗ್ ವ್ಯವಸ್ಥೆಯನ್ನೂ ಜಾರಿಗೆ ತರಲಾಗಿದೆ. ಇದರ ಭಾಗವಾಗಿ ಈಗಾಗಲೇ ಡ್ರೈರನ್ ನಡೆಸಿ, ಇಂಟರ್‌ನೆಟ್ ಹಾಗೂ ಯುಪಿಎಸ್ ವ್ಯವಸ್ಥೆ ಸರಿಯಾಗಿ ಕಾರ್ಯನಿರ್ವಹಿಸುವ ಬಗ್ಗೆ ಪರಿಶೀಲನೆ ಮಾಡಲಾಗಿದೆ.
ಪರೀಕ್ಷಾ ಪ್ರಕ್ರಿಯೆ ಸುಸೂತ್ರವಾಗಿ ನಡೆಯಲು 31 ಮಾರ್ಗಗಳನ್ನು ರಚಿಸಿ ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಜೊತೆಗೆ 79 ಸ್ಥಾನಿಕ ಜಾಗೃತ ದಳದ ಅಧಿಕಾರಿಗಳನ್ನು ಕೂಡ ನಿಯೋಜಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ದೂರದಿಂದ ಆಗಮಿಸುವ ವಿದ್ಯಾರ್ಥಿಗಳಿಗಾಗಿ ಬಸ್ ವ್ಯವಸ್ಥೆಯನ್ನೂ ಮಾಡಲಾಗಿದೆ.
ಪರೀಕ್ಷಾ ಕೇಂದ್ರಗಳಿಗೆ ನಿರಂತರ ವಿದ್ಯುತ್ ಸಂಪರ್ಕ ಒದಗಿಸುವಂತೆ ಮೆಸ್ಕಾಂಗೆ ಸೂಚನೆ ನೀಡಲಾಗಿದ್ದು, ಪೊಲೀಸ್ ಬಂದೋಬಸ್ತ್ ಕೂಡ ಕಲ್ಪಿಸಲಾಗಿದೆ. ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಸೈಬರ್ ಹಾಗೂ ಜೆರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸದಂತೆ ಆದೇಶಿಸಲಾಗಿದೆ.
ವಿದ್ಯಾರ್ಥಿಗಳು ಯಾವುದೇ ರೀತಿಯ ಮೊಬೈಲ್ ಅಥವಾ ಇತರೆ ಎಲೆಕ್ಟ್ರಾನಿಕ್ ಸಾಧನಗಳನ್ನು ಪರೀಕ್ಷಾ ಕೇಂದ್ರಗಳಿಗೆ ತರುವಂತಿಲ್ಲ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಪರೀಕ್ಷೆಗಳು ಶಾಂತಿಯುತ ಹಾಗೂ ಪಾರದರ್ಶಕವಾಗಿ ನಡೆಯುವಂತೆ ಎಲ್ಲಾ ಇಲಾಖೆಗಳು ಸಹಕರಿಸಬೇಕೆಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಪೋಸ್ಟ್‌ಮ್ಯಾನ್ ನ್ಯೂಸ್ ಬಳಗದಿಂದ ಹೃತ್ಪೂರ್ವಕ ಶುಭಾಶಯಗಳು.ಆತ್ಮವಿಶ್ವಾಸದಿಂದ, ಧೈರ್ಯದಿಂದ ಪರೀಕ್ಷೆಯನ್ನು ಎದುರಿಸಿ. ನಿಮ್ಮ ಪರಿಶ್ರಮಕ್ಕೆ ಖಂಡಿತ ಫಲ ಸಿಗುತ್ತದೆ. ಭಯವಿಲ್ಲದೆ, ಒತ್ತಡವಿಲ್ಲದೆ ಮನಸ್ಸನ್ನು ಏಕಾಗ್ರಗೊಳಿಸಿ ಪರೀಕ್ಷೆ ಬರೆಯಿರಿ — ನಿಮ್ಮ ಯಶಸ್ಸು ನಿಮ್ಮ ಕೈಯಲ್ಲಿದೆ. ಎಲ್ಲ ವಿದ್ಯಾರ್ಥಿಗಳಿಗೂ ಉಜ್ವಲ ಭವಿಷ್ಯ ಕೋರುತ್ತೇವೆ.
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…
ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…
ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…
ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…
ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ Farmers staged a massive protest…
ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ India Post GDS…