An SSLC student tragically died after slipping and falling into a pond in Baruve village near Ripponpet. The incident occurred while he was walking near a खेत bund with friends. Police have registered a case.
ರಿಪ್ಪನ್ ಪೇಟೆ : ಪಟ್ಟಣದ ಸಮೀಪದ ಬರುವೆ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ಗದ್ದೆಯೊಳಗಿನ ಕೆರೆಗೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದ SSLC ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ.
ಮದೀನಾ ಕಾಲೋನಿ ನಿವಾಸಿ ಮಹಮ್ಮದ್ ತಮೀಮ್ ಬಿನ್ ತಾಹಿರ್ ಹುಸೇನ್ ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ಚೌಡೇಶ್ವರಿ ಬೀದಿಯಲ್ಲಿ ಟ್ಯೂಷನ್ಗೆ ತೆರಳಿದ್ದ ಆತ, ಬಳಿಕ ಸ್ನೇಹಿತರೊಂದಿಗೆ ಬರುವೆ ಗ್ರಾಮದ ದಿಬ್ಬದತ್ತ ತೆರಳಿದ್ದಾನೆ. ಈ ವೇಳೆ ಗದ್ದೆಯೊಳಗಿನ ಕೆರೆಯ ಮೇಲೆ ನಡೆಯುತ್ತಿದ್ದಾಗ ಕಾಲುಜಾರಿ ನೀರಿಗೆ ಬಿದ್ದು ದುರ್ಘಟನೆ ಸಂಭವಿಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ನಂತರ ಸ್ಥಳೀಯರು ಯುವಕನನ್ನು ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ದಾಖಲಿಸಿದ್ದಾರೆ ಅಷ್ಟರಲ್ಲಾಗಲೇ ಯುವಕ ಮೃತಪಟ್ಟಿದ್ದಾನೆ ಎಂದು ವೈದ್ಯರು ಧೃಡಪಡಿಸಿದ್ದಾರೆ.
ಮೃತ ವಿದ್ಯಾರ್ಥಿ ಪಟ್ಟಣದ ರಾಮಕೃಷ್ಣ ವಿದ್ಯಾಲಯದಲ್ಲಿ ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿದ್ದು, ಮೂರು ಪಬ್ಲಿಕ್ ಪರೀಕ್ಷೆಗಳನ್ನೂ ಬರೆದಿದ್ದನು.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಈ ಕುರಿತು ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್