ತಂದೆಯ ಸಾವಿನ ನಡುವೆಯೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿ

A heartbreaking incident in Shivamogga where a student appeared for SSLC exam despite his father’s death due to suicide caused by debt burden, drawing praise for his courage.

ಶಿವಮೊಗ್ಗ : ವೈಯಕ್ತಿಕ ದುಃಖದ ನಡುವೆಯೂ ತನ್ನ ಭವಿಷ್ಯಕ್ಕಾಗಿ ಹೋರಾಟ ಮುಂದುವರಿಸಿದ ವಿದ್ಯಾರ್ಥಿಯೊಬ್ಬನ ಕಥೆ ಜಿಲ್ಲೆಯಲ್ಲೆಲ್ಲ ಮನಮುಟ್ಟುವಂತೆ ಮಾಡಿದೆ. ತಾಲೂಕಿನ ದ್ಯಾವಿನಕೆರೆ ಗ್ರಾಮದಲ್ಲಿ ನಡೆದ ಈ ಘಟನೆ ಸಮಾಜದ ಗಮನ ಸೆಳೆದಿದೆ.

ದ್ಯಾವಿನಕೆರೆ ಗ್ರಾಮದ ನಿವಾಸಿ ಮಂಜುನಾಥ್ (45) ಅವರು ಸಾಲದ ಬಾಧೆಯಿಂದಾಗಿ ಎರಡು ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಅವರು ರಾತ್ರಿ ಮೃತಪಟ್ಟಿದ್ದಾರೆ.

ಇದರಿಂದ ಕುಟುಂಬದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದ್ದರೂ, ಅವರ ಪುತ್ರ ಪ್ರೀತಮ್ ತನ್ನ ವಿದ್ಯಾಭ್ಯಾಸದ ಮಹತ್ವವನ್ನು ಅರಿತು ಧೈರ್ಯದಿಂದ ಮುಂದೆ ಬಂದಿದ್ದಾನೆ. ತಂದೆಯ ಅಂತಿಮ ಕ್ಷಣಗಳ ನಡುವೆಯೂ ಮನಸ್ಸಿನ ನೋವನ್ನು ಮೀರಿ, ಇಂದು ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಿದ್ದಾನೆ.

ಮಂಡಘಟ್ಟದಲ್ಲಿ ಅಭ್ಯಾಸ ಮಾಡುತ್ತಿದ್ದ ಪ್ರೀತಮ್, ಆಯನೂರಿನ ಶಾಲೆಗೆ ತೆರಳಿ ಪರೀಕ್ಷೆ ಬರೆದಿದ್ದಾನೆ. ತಂದೆಯ ಕಳೆದುಕೊಂಡ ದುಃಖದ ನಡುವೆಯೂ ಆತ ತೋರಿದ ಮನೋಬಲ ಹಾಗೂ ಹೊಣೆಗಾರಿಕೆಯು ಎಲ್ಲರ ಮನ ಗೆದ್ದಿದೆ.

ಈ ಘಟನೆ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮತ್ತು ಸಂಕಷ್ಟಗಳ ನಡುವೆಯೂ ಗುರಿ ಸಾಧನೆಗೆ ಮುಂದಾಗಬೇಕೆಂಬ ಸಂದೇಶ ನೀಡುತ್ತದೆ. ಪ್ರೀತಮ್‌ನ ಈ ಧೈರ್ಯಶಾಲಿ ನಡೆಗೆ ಶಿಕ್ಷಕರು, ಸ್ಥಳೀಯರು ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಯುವಕನ ಈ ಮನೋಬಲ ಹಾಗೂ ಸಂಕಷ್ಟದ ನಡುವೆಯೂ ವಿದ್ಯಾಭ್ಯಾಸದ ಮೇಲಿನ ಅವನ ಬದ್ಧತೆಯನ್ನು ಗಮನಿಸಿದ ಕಾಂಗ್ರೆಸ್ ಮುಖಂಡ ಸೂಡೂರು ಶಿವಣ್ಣ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇಂತಹ ಸಂದರ್ಭದಲ್ಲೂ ಪರೀಕ್ಷೆ ಬರೆಯಲು ಮುಂದಾದುದು ಎಲ್ಲ ವಿದ್ಯಾರ್ಥಿಗಳಿಗೆ ಮಾದರಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…

5 hours ago

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…

5 hours ago

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

19 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

19 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

1 day ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

2 days ago