Accidental fire destroys 1.5 acres of sugarcane crop in Kallur village, causing an estimated loss of ₹4–5 lakh to farmer Shanmukhappa. Case registered at Ripponpet police station.
ರಿಪ್ಪನ್ ಪೇಟೆ: ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಲ್ಲೂರು ಗ್ರಾಮದಲ್ಲಿ ಕಬ್ಬಿನ ಗದ್ದೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ರೈತನಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.
ಗ್ರಾಮದ ಸರ್ವೆ ನಂಬರ್ 60ರಲ್ಲಿ ಕೃಷಿ ಮಾಡುತ್ತಿದ್ದ ಬಡ ರೈತರಾದ ಷಣ್ಮುಖಪ್ಪ ಬಿನ್ ಕೃಷ್ಣಪೂಜಾರಿ ಅವರಿಗೆ ಸೇರಿದ ಜಾಗದಲ್ಲಿ ಈ ಅವಘಡ ಸಂಭವಿಸಿದೆ. ಸುಮಾರು 2 ಎಕರೆ ಪ್ರದೇಶದಲ್ಲಿ ಕಬ್ಬು ಚೆನ್ನಾಗಿ ಬೆಳೆಯಲಾಗಿತ್ತು. ಆದರೆ ದುರದೃಷ್ಟವಶಾತ್, ಸುಮಾರು 1.5 ಎಕರೆ ಪ್ರದೇಶದ ಕಬ್ಬು ಬೆಂಕಿಗೆ ಆಹುತಿಯಾಗಿ ಸಂಪೂರ್ಣ ಸುಟ್ಟುಹೋಗಿದೆ.
ಬೆಂಕಿಯಿಂದಾಗಿ ಕಬ್ಬು ಹಾಗೂ ಬೀಜದ ಕಬ್ಬು ನಾಶವಾಗಿರುವುದು ರೈತನಿಗೆ ಹೆಚ್ಚಿನ ನಷ್ಟವನ್ನುಂಟು ಮಾಡಿದೆ. ಪ್ರಾಥಮಿಕ ಅಂದಾಜು ಪ್ರಕಾರ ಸುಮಾರು 4 ರಿಂದ 5 ಲಕ್ಷ ರೂಪಾಯಿ ಮೌಲ್ಯದ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ.
ಶನಿವಾರ ಮಧ್ಯಾಹ್ನ ಸುಮಾರು 1.30 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಬೆಂಕಿ ಕಾಣಿಸಿಕೊಂಡ ಕೂಡಲೇ ಸ್ಥಳೀಯರು ಹಾಗೂ ರೈತರು ಸೇರಿ ಬೆಂಕಿ ಆರಿಸುವ ಪ್ರಯತ್ನ ನಡೆಸಿದರು. ಆದರೂ ಬೆಂಕಿ ವೇಗವಾಗಿ ವ್ಯಾಪಿಸಿದ್ದರಿಂದ ಹೆಚ್ಚಿನ ಪ್ರಮಾಣದ ಬೆಳೆ ಹಾನಿಯಾಗಿದೆ.
ಈ ಸಂಬಂಧ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಂಕಿ ತಗುಲಿದ ಕಾರಣಗಳ ಕುರಿತು ತನಿಖೆ ಮುಂದುವರಿದಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್