A Mahindra Thar jeep overturned near Sigandur bridge in Sagar after the driver lost control at a dangerous curve. Several passengers sustained minor injuries and the vehicle was badly damaged.
ಸಾಗರ: ತಾಲೂಕಿನ ಸಿಗಂದೂರು ಸೇತುವೆ ಸಮೀಪ ಭಾನುವಾರ ರಾತ್ರಿ ನಡೆದ ಅಪಘಾತದಲ್ಲಿ ಥಾರ್ ಜೀಪು ಪಲ್ಟಿಯಾಗಿ ವಾಹನದಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಸಂಭವಿಸಿದೆ.
ಸಿಗಂದೂರು ಕಡೆಯಿಂದ ಸಾಗರದತ್ತ ಪ್ರಯಾಣಿಸುತ್ತಿದ್ದ ಥಾರ್ ಜೀಪು ಸೇತುವೆಯ ಸಮೀಪದ ಅಪಾಯಕಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮೇಲೆಯೇ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ರಾತ್ರಿ ವೇಳೆ ಸಂಭವಿಸಿದ ಈ ಅಪಘಾತದಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಘಟನೆಯ ವೇಳೆ ಜೀಪಿನಲ್ಲಿ ಹಲವರು ಪ್ರಯಾಣಿಸುತ್ತಿದ್ದು, ಪಲ್ಟಿಯಾದ ಪರಿಣಾಮ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡವರಿಗೆ ಸ್ಥಳೀಯರು ತಕ್ಷಣ ಸಹಾಯ ಮಾಡಿ ಪ್ರಾಥಮಿಕ ಚಿಕಿತ್ಸೆ ನೀಡಿದರೆಂದು ಮಾಹಿತಿ ದೊರೆತಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಅಪಘಾತದ ರಭಸಕ್ಕೆ ಥಾರ್ ಜೀಪಿನ ಮುಂಭಾಗದ ಬಾನೆಟ್ ಸಂಪೂರ್ಣ ನುಜ್ಜುಗುಜ್ಜಾಗಿದ್ದು ವಾಹನಕ್ಕೆ ಗಮನಾರ್ಹ ಹಾನಿಯಾಗಿದೆ. ಸ್ಥಳೀಯರು ನೀಡಿದ ಮಾಹಿತಿ ಪ್ರಕಾರ, ಸೇತುವೆಯ ಸಮೀಪದ ಈ ತಿರುವು ಅಪಾಯಕಾರಿ ಎಂದು ಹಲವರು ಆರೋಪಿಸಿದ್ದಾರೆ. ರಾತ್ರಿ ವೇಳೆ ಈ ಮಾರ್ಗದಲ್ಲಿ ಸಂಚರಿಸುವ ವಾಹನ ಚಾಲಕರು ಹೆಚ್ಚಿನ ಜಾಗ್ರತೆ ವಹಿಸಬೇಕು ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್