POSTMAN NEWS

ನೈಜ ಸುದ್ದಿ ನೇರ ಬಿತ್ತರ..

ತೀರ್ಥಹಳ್ಳಿ ಯುವ ಕಾಂಗ್ರೆಸ್ ಇಂಟೆಕ್ ವಿಭಾಗದ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಕೌಶಿಕ್ ಭಂಡಾರಿ ನೇಮಕ

GridArt 20260330

A youth leader has been appointed as Taluk General Secretary of the Youth Congress INTUC in Thirthahalli constituency, receiving widespread congratulations from party leaders and workers.

ತೀರ್ಥಹಳ್ಳಿ ಯುವ ಕಾಂಗ್ರೆಸ್ ಇಂಟೆಕ್ ವಿಭಾಗದ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಕೌಶಿಕ್ ಭಂಡಾರಿ ನೇಮಕ

ತೀರ್ಥಹಳ್ಳಿ : ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಯುವ ಕಾಂಗ್ರೆಸ್ ಇಂಟೆಕ್ ವಿಭಾಗದ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಯುವ ನಾಯಕ ಕೌಶಿಕ್ ಭಂಡಾರಿ ಅವರನ್ನು ನೇಮಕ ಮಾಡಲಾಗಿದೆ. ಈ ನೇಮಕಾತಿ ಪಕ್ಷದ ಸಂಘಟನೆಗೆ ಹೊಸ ಚೈತನ್ಯ ತುಂಬುವ ನಿರೀಕ್ಷೆ ಮೂಡಿಸಿದೆ.

ಜಿಲ್ಲಾ ಯುವ ಕಾಂಗ್ರೆಸ್ ಇಂಟೆಕ್ ವಿಭಾಗದ ಅಧ್ಯಕ್ಷರಾದ ಸಂತೋಷ್ ಕುಮಾರ್ ಅವರು ಕೌಶಿಕ್ ಭಂಡಾರಿ ಅವರಿಗೆ ನೇಮಕಾತಿ ಆದೇಶ ನೀಡಿ, ಯುವಕರಿಗೆ ಹೆಚ್ಚಿನ ಹೊಣೆಗಾರಿಕೆ ನೀಡುವ ಮೂಲಕ ಪಕ್ಷವನ್ನು ಬಲಪಡಿಸುವ ಉದ್ದೇಶ ಹೊಂದಿರುವುದಾಗಿ ತಿಳಿಸಿದ್ದಾರೆ.

ನೂತನ ಪದಾಧಿಕಾರಿ ಪಕ್ಷದ ಸಿದ್ಧಾಂತಗಳಿಗೆ ಬದ್ಧವಾಗಿ ಕಾರ್ಯನಿರ್ವಹಿಸಿ, ಕ್ಷೇತ್ರದಲ್ಲಿ ಯುವಕರನ್ನು ಸಂಘಟಿಸುವಲ್ಲಿ ಮಹತ್ವದ ಪಾತ್ರ ವಹಿಸುವ ವಿಶ್ವಾಸ ವ್ಯಕ್ತಪಡಿಸಲಾಗಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಆರ್ ಪ್ರಸನ್ನ ಕುಮಾರ್, ಎಮ್ ಶ್ರೀಕಾಂತ್, ತೀರ್ಥಹಳ್ಳಿ ಕ್ಷೇತ್ರದ ಹಿರಿಯ ನಾಯಕರುಗಳಾದ ಡಾ ಆರ್ ಎಂ ಮಂಜುನಾಥ್ ಗೌಡ ಹಾಗೂ ಕಿಮ್ಮನೆ ರತ್ನಾಕರ್ ಸೇರಿದಂತೆ ಹಲವು ಗಣ್ಯರು ನೂತನ ಪದಾಧಿಕಾರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಹಿಂದುಳಿದ ವರ್ಗಗಳ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಯುವ ಸಂಘಟನೆಯ ಉಸ್ತುವಾರಿಯಾಗಿರುವ ಕುರುವಳ್ಳಿ ನಾಗರಾಜ್ ಅವರು ಕೂಡ ಶುಭಾಶಯಗಳನ್ನು ತಿಳಿಸಿದ್ದಾರೆ.

ನೂತನವಾಗಿ ಆಯ್ಕೆಯಾದ ಪ್ರಧಾನ ಕಾರ್ಯದರ್ಶಿ ಕೌಶಿಕ್ ಭಂಡಾರಿ ಮಾತನಾಡಿ ತಮ್ಮ ಮೇಲೆ ಪಕ್ಷವಿಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕಾರ್ಯನಿರ್ವಹಿಸುವುದಾಗಿ ತಿಳಿಸಿದ್ದಾರೆ. ಕ್ಷೇತ್ರದಲ್ಲಿ ಪಕ್ಷದ ಸಂಘಟನೆ ಮತ್ತಷ್ಟು ಬಲಗೊಳ್ಳಲು ಶ್ರಮಿಸುವುದಾಗಿ ಅವರು ಹೇಳಿದ್ದಾರೆ.

ಈ ನೇಮಕಾತಿಗೆ ಕಾರ್ಯಕರ್ತರಿಂದಲೂ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದ್ದು, ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಚಟುವಟಿಕೆಗಳು ಇನ್ನಷ್ಟು ಚುರುಕುಗೊಳ್ಳಲಿವೆ ಎಂಬ ನಿರೀಕ್ಷೆ ವ್ಯಕ್ತಸುರಿಮಳೆ

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.