ಯುಗಾದಿ ದಿನ ಜಿಲ್ಲೆಯಲ್ಲಿ ಮೂರು ಅಪಘಾತ : ಓರ್ವ ಸಾವು, ಹಲವರಿಗೆ ಗಾಯ

Three separate road accidents in Shivamogga on Ugadi day leave one dead and several injured, raising concerns over road safety and reckless driving.

ಶಿವಮೊಗ್ಗ: ಯುಗಾದಿ ಹಬ್ಬದ ದಿನವೇ ಜಿಲ್ಲೆಯಲ್ಲಿ ಮೂರು ವಿಭಿನ್ನ ಸ್ಥಳಗಳಲ್ಲಿ ಭೀಕರ ರಸ್ತೆ ಅಪಘಾತಗಳು ಸಂಭವಿಸಿ ಓರ್ವ ಯುವಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಹಬ್ಬದ ಸಂಭ್ರಮದ ನಡುವೆ ಸಂಭವಿಸಿದ ಈ ದುರ್ಘಟನೆಗಳು ಜನರಲ್ಲಿ ಆತಂಕ ಮೂಡಿಸಿವೆ.

ಗಾಜನೂರು ಬಳಿ ಭೀಕರ ಡಿಕ್ಕಿ: ಯುವಕ ಸಾವು

ಶಿವಮೊಗ್ಗ ತಾಲೂಕಿನ ಗಾಜನೂರು ಸಮೀಪದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕ್ರಾಸ್ ಬಳಿ ಮಂಗಳೂರಿನಿಂದ ಬರುತ್ತಿದ್ದ ಖಾಸಗಿ ಬಸ್ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಈ ದುರ್ಘಟನೆಯಲ್ಲಿ ಶಿವಮೊಗ್ಗದ ಬುದ್ಧನಗರ ನಿವಾಸಿ, ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಟೈಪಿಸ್ಟ್ ಆಗಿ ಕೆಲಸ ಮಾಡುತ್ತಿದ್ದ 28 ವರ್ಷದ ಪ್ರೇಮ್ ಕುಮಾರ್ ಮೃತಪಟ್ಟಿದ್ದಾರೆ.

ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮನೋಜ್ (21), ಪವನ್ ಹಾಗೂ ಗಿರೀಶ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಡಿಕ್ಕಿಯ ತೀವ್ರತೆಗೆ ಆಟೋ ಸಂಪೂರ್ಣವಾಗಿ ಜಖಂಗೊಂಡಿದೆ.

ಉಷಾ ನರ್ಸಿಂಗ್ ಹೋಂ ಬಳಿ ಕಾರು-ಆಂಬ್ಯುಲೆನ್ಸ್ ಡಿಕ್ಕಿ

ನಗರದ ಉಷಾ ನರ್ಸಿಂಗ್ ಹೋಂ ಸಮೀಪ ಮಾರ್ಚ್ 19ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಬ್ರೀಝಾ ಕಾರು ಮತ್ತು ಖಾಸಗಿ ಆಂಬ್ಯುಲೆನ್ಸ್ ನಡುವೆ ಅಪಘಾತ ಸಂಭವಿಸಿದೆ.

ಕಾಶೀಪುರದಿಂದ ಹನ್ಸವಾಡಿಗೆ ತೆರಳುತ್ತಿದ್ದ ಕಾರಿಗೆ ಸೊರಬ ಕಡೆಯಿಂದ ಬಂದ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ ಕಾರು ಮೂರು ಬಾರಿ ಪಲ್ಟಿಯಾಗಿ ನಿಂತಿದೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸುರೇಶ್, ದೀಪಾ, 14 ವರ್ಷದ ಮಗು ಹಾಗೂ 74 ವರ್ಷದ ಕಿಶನ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾರಿನ ಮುಂಭಾಗ ಜಖಂಗೊಂಡಿದ್ದು, ಹಿಂದಿನ ಗಾಜು ಸಂಪೂರ್ಣ ಪುಡಿಯಾಗಿದೆ. ಈ ಕುರಿತು ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆನಂದಪುರದಲ್ಲಿ ಓಮಿನಿ-ಗೂಡ್ಸ್ ವಾಹನ ಡಿಕ್ಕಿ

ಸಾಗರ ತಾಲೂಕಿನ ಆನಂದಪುರ ಸಮೀಪದ ಐಗಿನ ಬೈಲು ಕ್ರಾಸ್ ಬಳಿ ಮಾರುತಿ ಓಮಿನಿ ಮತ್ತು 407 ಲಗೇಜ್ ವಾಹನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಆನಂದಪುರದಿಂದ ಸಾಗರ ಕಡೆಗೆ ತೆರಳುತ್ತಿದ್ದ ಓಮಿನಿ ಹಾಗೂ ಎದುರು ದಿಕ್ಕಿನಿಂದ ಬರುತ್ತಿದ್ದ ಗೂಡ್ಸ್ ವಾಹನ ಡಿಕ್ಕಿಯಾಗಿದ್ದು, ಓಮಿನಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಈ ಅಪಘಾತದಲ್ಲಿ ಕಾರಿನ ಚಾಲಕ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…

1 hour ago

ಈದ್ ಮಿಲಾದ್ – ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್ ವಾರ್ನಿಂಗ್

ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…

2 hours ago

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…

9 hours ago

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…

9 hours ago

ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ

ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ A woman was allegedly…

10 hours ago

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಬರುವೆ ಶಾಲೆಯ ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ Teacher Ambika…

21 hours ago