ಉಮಾ ಸುರೇಶ್‌ಗೆ ಅತ್ಯುತ್ತಮ ಮಹಿಳಾ ಸಾಧಕಿ ಪ್ರಶಸ್ತಿ

Uma Suresh of Ripponpet, director of Shivamogga Mahila Bank, was honored with the Best Woman Achiever Award at the International Women’s Day celebration held in Shikaripura.

ರಿಪ್ಪನ್‌ಪೇಟೆ : ಶಿವಮೊಗ್ಗ ಮಹಿಳಾ ಬ್ಯಾಂಕ್ ನಿರ್ದೇಶಕಿ ರಿಪ್ಪನ್‌ಪೇಟೆಯ ಉಮಾ ಸುರೇಶ್ ಅವರಿಗೆ ಅತ್ಯುತ್ತಮ ಮಹಿಳಾ ಸಾಧಕಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಶಿಕಾರಿಪುರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಪರಿಸರ ಮತ್ತು ಪ್ರವಾಸೋದ್ಯಮ ಅಭಿವೃದ್ದಿ ಸಹಕಾರ ಸಂಘ ನಿಯಮಿತ ವತಿಯಿಂದ ಆಯೋಜಿಸಲಾದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಈ ಗೌರವ ಪ್ರದಾನ ಮಾಡಲಾಯಿತು.
ಮಹಿಳೆಯರ ಸಾಮಾಜಿಕ, ಆರ್ಥಿಕ ಮತ್ತು ಸಂಘಟನಾ ಕ್ಷೇತ್ರಗಳಲ್ಲಿ ನೀಡಿದ ಸೇವೆಯನ್ನು ಪರಿಗಣಿಸಿ ಉಮಾ ಸುರೇಶ್ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ.

ಹಲವು ವರ್ಷಗಳಿಂದ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿರುವ ಅವರು, ಮಹಿಳಾ ಸಬಲೀಕರಣ, ಸ್ವಸಹಾಯ ಸಂಘಗಳ ಬಲವರ್ಧನೆ ಹಾಗೂ ಸಮಾಜದಲ್ಲಿ ಮಹಿಳೆಯರ ಪಾತ್ರವನ್ನು ಉತ್ತೇಜಿಸುವ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ.

ಶಿವಮೊಗ್ಗ ಮಹಿಳಾ ಬ್ಯಾಂಕ್ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಉಮಾ ಸುರೇಶ್ ಅವರು ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ವಿವಿಧ ಯೋಜನೆಗಳನ್ನು ಪರಿಚಯಿಸುವಲ್ಲಿ ಹಾಗೂ ಅವರ ಅಭಿವೃದ್ಧಿಗೆ ಮಾರ್ಗದರ್ಶನ ನೀಡುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಮಹಿಳೆಯರು ಆತ್ಮವಿಶ್ವಾಸದಿಂದ ಸಮಾಜದಲ್ಲಿ ಮುಂದುವರಿಯಬೇಕು ಎಂಬ ಉದ್ದೇಶದಿಂದ ಅವರು ಹಲವು ಕಾರ್ಯಕ್ರಮಗಳನ್ನು ಸಂಘಟಿಸುತ್ತಿದ್ದಾರೆ.

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಗಣ್ಯರು, ಸಂಘಟನೆಯ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು, ಪ್ರಶಸ್ತಿ ಸ್ವೀಕರಿಸಿದ ಉಮಾ ಸುರೇಶ್ ಅವರನ್ನು ಅಭಿನಂದಿಸಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

1 hour ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

18 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

19 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

20 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

2 days ago