ಮಹಿಳೆಯರು ಮುಖ್ಯ ವಾಹಿನಿಗೆ ಬರಬೇಕು : ಎಂ. ಶ್ರೀಕಾಂತ್
ಮುಖ್ಯ ವಾಹಿನಿಗೆ ಮಹಿಳೆಯರು ಬರಬೇಕು ಮತ್ತು ಸಾಮಾಜಿಕ ಕ್ಷೇತ್ರಕ್ಕೆ ತಮ್ಮದೇ ಆದಾ ಕೊಡುಗೆ ನೀಡಬೇಕು ಎಂದು ಕಾಂಗ್ರೆಸ್ ಮುಖಂಡರು ಹಾಗೂ ಡಿ ಸಿಸಿ ಬ್ಯಾಂಕ್ ನಿರ್ದೇಶಕರಾದ ಎಂ. ಶ್ರೀಕಾಂತ್ ಅವರು ಕರೆ ನೀಡಿದರು.
ಅವರಿಂದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಲ್ಲಿ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಮಹಿಳೆಯರಿಗೆ ರಾಜಕೀಯ ಮೀಸಲಾತಿ ಕಲ್ಪಿಸಿ ಮಹಿಳೆಯರ ಏಳಿಗೆಗೆ ಶ್ರಮಿಸಿದ್ದಾರೆ, ಕಾಂಗ್ರೆಸ್ ಸರ್ಕಾರದಲ್ಲೂ ಮಹಿಳೆಯರಿಗೆ ಸೂಕ್ತ ಸ್ಥಾನಮಾನವನ್ನು ನೀಡಲಾಗಿದೆ. ಇದನ್ನು ಮಹಿಳೆಯರು ಸದುಪಯೋಗ ಪಡಿಸಬೇಕೆಂದು ಕರೆ ನೀಡಿದರು.
ಸುರಭಿ ಮಹಿಳಾ ಮಂಡಳಿ ನಿರ್ದೇಶಕರಾದ ರೇಖಾ ರವರು ಮಾತನಾಡಿ ಮಹಿಳೆಯರು ಸಾಮಾಜಿಕ ಜಾಲತಾಣವನ್ನು ಬಳಸುವಾಗ ಜಾಗೃತರಾಗಿರಬೇಕು, ತಮ್ಮ ವೈಯಕ್ತಿಕ ಫೋಟೋವನ್ನು ಶೇರ್ ಮಾಡುವಾಗ ಎಚ್ಚರಿಕೆ ವಹಿಸಬೇಕು ಇಲ್ಲದಿದ್ದರೆ ಅದು ದುರುಪಯೋಗವಾಗಿ ಮಹಿಳೆಯರ ಜೀವನಕ್ಕೆ ಕುತ್ತು ತರಬಹುದು ಎಂದು ಎಚ್ಚರಿಸಿದರು.
ಕಾರ್ಯಕ್ರಮವನ್ನು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಆರ್ ಪ್ರಸನ್ನ ಕುಮಾರ್ ಉದ್ಘಾಟಿಸಿದರು, ಮಹಿಳಾ ಕಾಂಗ್ರೆಸ್, ಜಿಲ್ಲಾಧ್ಯಕ್ಷ ಶ್ವೇತಾ ಬಂಡಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕಲಗೋಡು ರತ್ನಾಕರ್, ಕುವೆಂಪು ವಿವಿ ಎನ್ ಎಸ್ ಎಸ್ ಸಂಯೋಜಕರಾದ ಡಾ. ಶುಭಮರವಂತೆ, ಪುಷ್ಪ ಶಿವಕುಮಾರ್, ವಿಜಯಲಕ್ಷ್ಮಿ ಪಾಟೀಲ್, ಸ್ಟೆಲ್ಲಾ ಮಾರ್ಟಿನ್, ಭಾರತಿ ರಾಮಕೃಷ್ಣ, ಕವಿತಾ, ಯಮುನಾ ರಂಗೇಗೌಡ, ನೇತ್ರಾವತಿ, ಸುವರ್ಣ ನಾಗರಾಜ್, ವೇದವತಿ, ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್