A 26-year-old youth from Sagar died by suicide after allegedly jumping in front of a train traveling from Mysuru to Talaguppa. Railway and local police visited the spot and started an investigation.
ರೈಲಿಗೆ ತಲೆಕೊಟ್ಟು ಯುವಕ ಸಾವು – ಸಾಗರದಲ್ಲಿ ನಡೆದ ದುರ್ಘಟನೆ
ಸಾಗರ : ರೈಲು ಹಳಿಗೆ ತಲೆಕೊಟ್ಟು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಸಾಗರ ನಗರದಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಮೃತರನ್ನು ಸ್ಥಳೀಯ ನಿವಾಸಿ ನಿತಿನ್ (26) ಎಂದು ಗುರುತಿಸಲಾಗಿದೆ.
ಲಭ್ಯವಿರುವ ಮಾಹಿತಿಯಂತೆ, ನಿತಿನ್ ಅವರು ಸಾಗರದ ದಿನಸಿ ವ್ಯಾಪಾರಿ ಆರ್.ಕೆ. ನಾಗರಾಜ್ ಅವರ ಪುತ್ರನಾಗಿದ್ದು,ಉದ್ಯಮಿ ಬೆಲ್ಲದ ಕೃಷ್ಣಪ್ಪ ರವರ ಮೊಮ್ಮಗನಾಗಿದ್ದಾನೆ. ಇಂದು ಮಧ್ಯಾಹ್ನ ಸುಮಾರು 1 ಗಂಟೆ ವೇಳೆಗೆ ಮೈಸೂರಿನಿಂದ ತಾಳಗುಪ್ಪ ಕಡೆಗೆ ಸಂಚರಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ರೈಲ್ವೆ ಪೊಲೀಸರು ಹಾಗೂ ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸುವ ಕ್ರಮ ಕೈಗೊಳ್ಳಲಾಗಿದೆ.
ಯುವಕ ಈ ತೀವ್ರ ನಿರ್ಧಾರ ಕೈಗೊಳ್ಳಲು ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…