ಕಲ್ಲೂರು ಬಸವಣ್ಣ ದೇವಸ್ಥಾನದಲ್ಲಿ 15ನೇ ಶತಮಾನದ ವಿಜಯನಗರ ಕಾಲದ ಅಪರೂಪದ ಶಾಸನ ಪತ್ತೆ

ಕಲ್ಲೂರು ಬಸವಣ್ಣ ದೇವಸ್ಥಾನದಲ್ಲಿ 15ನೇ ಶತಮಾನದ ವಿಜಯನಗರ ಕಾಲದ ಅಪರೂಪದ ಶಾಸನ ಪತ್ತೆ

A rare 15th-century Vijayanagara era inscription has been discovered at the Kalluru Basavanna Temple near Ripponpet, revealing historical land donation details

ರಿಪ್ಪನ್‌ಪೇಟೆ: ಸಮೀಪದ ಹೆದ್ದಾರಿಪುರದ ಕಲ್ಲೂರು ಗ್ರಾಮದ ಶ್ರೀ ಬಸವಣ್ಣ ದೇವಸ್ಥಾನದ ಆವರಣದಲ್ಲಿ ವಿಜಯನಗರ ಸಾಮ್ರಾಜ್ಯದ ಕಾಲಕ್ಕೆ ಸೇರಿದ ಅಪರೂಪದ ‘ನಂದಿಗಂಬ ದಾನ ಶಾಸನ’ವೊಂದು ಪತ್ತೆಯಾಗಿದ್ದು, ಇದು ಈ ಭಾಗದ ಸ್ಥಳೀಯ ಇತಿಹಾಸದ ಮೇಲೆ ಹೊಸ ಬೆಳಕು ಚೆಲ್ಲಿದೆ.

​ಸಂಶೋಧಕರಾದ ಆದಿತ್ಯ ನಂಜವಳ್ಳಿ, ಗಣೇಶ್ ಕೆ.ಎನ್ ಹಾಗೂ ಪತ್ರಕರ್ತ ಎನ್.ಕಾರ್ತಿಕ್ ಕೌಂಡಿನ್ಯ ಅವರ ತಂಡ ಈ ಶಾಸನವನ್ನು ಪತ್ತೆಹಚ್ಚಿ ಅಧ್ಯಯನ ನಡೆಸಿದೆ. ಇದು ವಿಜಯನಗರ ಸಾಮ್ರಾಜ್ಯದ ಸಂಗಮ ವಂಶದ ಆಳ್ವಿಕೆಯ ಕಾಲಕ್ಕೆ, ನಿರ್ದಿಷ್ಟವಾಗಿ 15ನೇ ಶತಮಾನಕ್ಕೆ ಸೇರಿದ್ದಾಗಿದೆ ಎಂದು ಗುರುತಿಸಲಾಗಿದೆ.

ಶಾಸನದ ಹಿನ್ನೆಲೆ ಮತ್ತು ಮಾಹಿತಿ:

ಶಾಸನದಲ್ಲಿರುವ ಮಾಹಿತಿಯ ಪ್ರಕಾರ, ಕ್ರಿ.ಶ. 1424 (ಶಕವರ್ಷ 1346)ರಲ್ಲಿ ಮೂರನೇ ಬುಕ್ಕರಾಯನ ಮಗ ಎರಡನೇ ದೇವರಾಯನು ಆಳ್ವಿಕೆ ನಡೆಸುತ್ತಿದ್ದ ಸಮಯದಲ್ಲಿ ಈ ಭೂದಾನ ನಡೆದಿದೆ. ಶಾಸನದಲ್ಲಿ ಕಲ್ಲೂರು ಗ್ರಾಮವನ್ನು ‘ಕಲೂರ ನಾಡು’ ಎಂದು ಉಲ್ಲೇಖಿಸಲಾಗಿದೆ. ಆರಗದನಾಡಿನ ವ್ಯಾಪ್ತಿಗೆ ಸೇರಿದ ಈ ಕಲೂರನಾಡನ್ನು ಹಂಪಿಯ ಪ್ರಸಿದ್ಧ ವಿರೂಪಾಕ್ಷ ದೇವರಿಗೆ ಅಮೃತಪಡಿ (ನೈವೇದ್ಯ) ಸೇವೆಗಾಗಿ ಧಾರೆಯೆರೆದು ಕೊಟ್ಟಿರುವುದಾಗಿ ಶಾಸನದಲ್ಲಿ ಸ್ಪಷ್ಟವಾಗಿ ವಿವರಿಸಲಾಗಿದೆ. ಇದು ಆ ಕಾಲದಲ್ಲಿ ದೇವಾಲಯಗಳ ನಿರ್ವಹಣೆ ಮತ್ತು ಪೂಜಾ ಕಾರ್ಯಗಳಿಗೆ ಭೂದಾನ ನೀಡುವ ಮಹತ್ವದ ಪರಂಪರೆಯನ್ನು ಸಾರುತ್ತದೆ.

ಗಡಿಗಳ ಉಲ್ಲೇಖ ಮತ್ತು ರಾಜರ ಬಿರುದುಗಳು:

ಶಾಸನದಲ್ಲಿ ವಿಜಯನಗರದ ಅರಸ ಮೂರನೇ ಬುಕ್ಕರಾಯನನ್ನು “ಮಹಾರಾಜಾದಿರಾಜ ರಾಜಪರಮೇಶ್ವರ ಶ್ರೀ ವೀರಪ್ರತಾಪ ವಿಜಯಬುಕ್ಕರಾಯ” ಹಾಗೂ ಎರಡನೇ ದೇವರಾಯನನ್ನು “ವೀರಪ್ರತಾಪದೇವರಾಯ ಮಹಾರಾಯ” ಎಂದು ಕೊಂಡಾಡಲಾಗಿದೆ. ಅಲ್ಲದೆ, ಅಂದಿನ ಕಲೂರನಾಡಿನ ಗಡಿಭಾಗಗಳಾಗಿದ್ದ ಒಡರಸುಳಿ (ವಡಾಹೊಸಳ್ಳಿ), ಬಿದರಹಳ್ಳಿ, ತೆಳಲ (ತಳಲೆ), ಕಣಬಂದೂರು, ಕರಡಿಗ ಮತ್ತು ಕಕರಿಯ ಗ್ರಾಮಗಳ ಸ್ಪಷ್ಟ ಉಲ್ಲೇಖವಿದ್ದು, ಆ ಕಾಲದ ಭೌಗೋಳಿಕ ವ್ಯಾಪ್ತಿ ಮತ್ತು ಆಡಳಿತ ವ್ಯವಸ್ಥೆಯ ಕುರಿತು ಅಮೂಲ್ಯ ಮಾಹಿತಿ ದೊರೆತಿದೆ.

​ಈ ಸಂದರ್ಭದಲ್ಲಿ ಶ್ರೀ ಬಸವಣ್ಣ ದೇವಸ್ಥಾನದ ಅಧ್ಯಕ್ಷರಾದ ನಾಗರಾಜ್ ವೈ.ಟಿ, ಗೌರವಾಧ್ಯಕ್ಷ ವೀರಭದ್ರಪ್ಪ ಗೌಡ, ಗಿರಿರಾಜ್ ಗೌಡ, ಮಂಜುನಾಥ್, ಆದರ್ಶ ಕಲ್ಲೂರು, ಶಿವಣ್ಣ, ಚಂದ್ರಹಾಸ, ಮಲ್ಲಿಕಾರ್ಜುನ, ದಾನಪ್ಪ, ಆದರ್ಶ ಮೂಗುಡ್ತಿ ಸೇರಿದಂತೆ ಹಲವು ಗ್ರಾಮಸ್ಥರು ಉಪಸ್ಥಿತರಿದ್ದರು.

“ವಿಜಯನಗರ ಸಾಮ್ರಾಜ್ಯದ ಅಧೀನ ರಾಜ್ಯವಾಗಿ ಆರಗನಾಡು ಅಸ್ತಿತ್ವಕ್ಕೆ ಬಂದಿದ್ದರಿಂದ ಈ ನಾಡಿನ ಕೆಲವು ಪ್ರದೇಶಗಳನ್ನು ವಿಜಯನಗರ ಸಾಮ್ರಾಜ್ಯಕ್ಕೆ ದಾನ ದತ್ತಿ ಕೊಟ್ಟ ಬಗ್ಗೆ ಶಾಸನಗಳಲ್ಲಿ ಮಾಹಿತಿ ಲಭಿಸುತ್ತದೆ. ಇಲ್ಲಿ ಸಿಕ್ಕಿರುವ ಶಾಸನದಿಂದ ಅಂದಿನ ರಾಜರ ಮಾಹಿತಿ ಮಾತ್ರವಲ್ಲದೆ ಸ್ಥಳೀಯ ಗ್ರಾಮಗಳ ಗಡಿಗಳು ಲಭ್ಯವಾಗಿವೆ. ಗ್ರಾಮಗಳ ವಿಸ್ತೀರ್ಣದ ಮಾಹಿತಿ ಸ್ಥಳೀಯ ಅಧ್ಯಯನದ ದೃಷ್ಟಿಯಿಂದ ಬಹಳ ಮಹತ್ವದ್ದಾಗಿದೆ.”
– ಆದಿತ್ಯ ನಂಜವಳ್ಳಿ, ಸಂಶೋಧಕರು

“ನಮ್ಮ ಗ್ರಾಮದ ಬಸವಣ್ಣ ದೇವಸ್ಥಾನದಲ್ಲಿ ಇಷ್ಟು ಹಳೆಯ ವಿಜಯನಗರ ಕಾಲದ ಶಾಸನ ಪತ್ತೆಯಾಗಿರುವುದು ನಮಗೆ ಹೆಮ್ಮೆಯ ವಿಷಯ. ಇದರಿಂದ ನಮ್ಮ ಕಲೂರ ನಾಡಿನ ಇತಿಹಾಸ ಎಲ್ಲರಿಗೂ ತಿಳಿಯುವಂತಾಗಿದೆ.”
– ವೀರಭದ್ರಪ್ಪ ಗೌಡ, ಸ್ಥಳೀಯರು

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

14 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

1 day ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

1 day ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

1 day ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

1 day ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

2 days ago