ಅಂಬೇಡ್ಕರ್ ಪೋಟೊ ಹಿಡಿದು ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮುಂದೆ ಮಹಿಳೆಯ ಪ್ರತಿಭಟನೆ

ಅಂಬೇಡ್ಕರ್ ಪೋಟೊ ಹಿಡಿದು ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮುಂದೆ ಮಹಿಳೆಯ ಪ್ರತಿಭಟನೆ

A woman staged a solo protest in front of Ripponpet police station holding Dr. Ambedkar’s photo, alleging land encroachment and seeking justice and protection from authorities.

ರಿಪ್ಪನ್‌ಪೇಟೆ: ಬಾಬಾಸಾಹೇಬ ಡಾ. ಅಂಬೇಡ್ಕರ್ ಅವರ ಜನ್ಮದಿನದಂದು ನ್ಯಾಯಕ್ಕಾಗಿ ಒತ್ತಾಯಿಸಿ ಮಹಿಳೆಯೊಬ್ಬರು ಠಾಣೆ ಎದುರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.

ರಿಪ್ಪನ್‌ಪೇಟೆ ಸಮೀಪದ ಗವಟೂರು ಗ್ರಾಮದ ನವ್ಯ ದೇವರಾಜ್ ಎಂಬ ಮಹಿಳೆ, ಅಂಬೇಡ್ಕರ್ ಅವರ ಭಾವಚಿತ್ರವನ್ನು ಕೈಯಲ್ಲಿ ಹಿಡಿದು ನ್ಯಾಯ ಕೋರಿ ಠಾಣೆ ಎದುರು ನಿಂತು ಗಮನ ಸೆಳೆದರು.

ಕೆರೆಹಳ್ಳಿ ಹೋಬಳಿಯ ಗವಟೂರು ಗ್ರಾಮದ ಸರ್ವೇ ನಂ.101ರಲ್ಲಿ ಪರಿಶಿಷ್ಟ ಜನಾಂಗದ ರೈತ ಕುಟುಂಬವಾದ ಭೀಮಣ್ಣ ಬಿನ್ ಪುಟ್ಟಪ್ಪ ಅವರಿಗೆ ಸರ್ಕಾರದಿಂದ ದರಖಾಸು ಜಮೀನು ಮಂಜೂರಾಗಿ ಹಕ್ಕುಪತ್ರ ನೀಡಲಾಗಿದೆ. ಆದರೆ, ಆ ಜಾಗವನ್ನು ಮೇಲ್ವರ್ಗದ ಕೆಲವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಅನ್ಯಾಯ ಮಾಡುತ್ತಿದ್ದಾರೆಂದು ಮಹಿಳೆ ಆರೋಪಿಸಿದ್ದಾರೆ.

ಈ ಅನ್ಯಾಯದ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರನ್ನು ಹಲವು ಬಾರಿ ಮನವಿ ಮಾಡಿದ್ದರೂ, ತಮಗೆ ಸೂಕ್ತ ರಕ್ಷಣೆ ನೀಡಲಾಗುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. “ನಮಗೆ ಸೇರಿದ ಜಾಗವನ್ನು ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದ್ದೇವೆ. ಸರ್ವೇ ಇಲಾಖೆ ಮೂಲಕ ಜಮೀನಿನ ಸರಿಯಾದ ಅಳತೆ ಮಾಡಿಸಿದರೆ ಯಾರು ತಪ್ಪು ಮಾಡುತ್ತಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ,” ಎಂದು ನವ್ಯ ದೇವರಾಜ್ ತಮ್ಮ ನೋವನ್ನು ಹೊರಹಾಕಿದರು.

ಘಟನೆಯ ಮಾಹಿತಿ ತಿಳಿದ ತಕ್ಷಣ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ಮಹಿಳೆಗೆ ಬೆಂಬಲ ಸೂಚಿಸಿದರು. ಬಳಿಕ ಪಿಎಸ್‌ಐ ರಾಜು ರೆಡ್ಡಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಸಮಸ್ಯೆಗೆ ಪರಿಹಾರ ಕಲ್ಪಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ, ಮಹಿಳೆ ತನ್ನ ಪ್ರತಿಭಟನೆಯನ್ನು ಹಿಂಪಡೆದರು.

ಒಟ್ಟಾರೆ, ಅಂಬೇಡ್ಕರ್ ಅವರ ಸ್ಮರಣೆಯ ದಿನದಂದು ನಡೆದ ಈ ಏಕಾಂಗಿ ಹೋರಾಟ ಸ್ಥಳೀಯರಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ನ್ಯಾಯಕ್ಕಾಗಿ ಹೋರಾಟ ಇನ್ನಷ್ಟು ಗಂಭೀರತೆ ಪಡೆದುಕೊಂಡಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…

42 minutes ago

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…

2 hours ago

ಈದ್ ಮಿಲಾದ್ – ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್ ವಾರ್ನಿಂಗ್

ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…

3 hours ago

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…

10 hours ago

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…

11 hours ago

ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ

ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ A woman was allegedly…

11 hours ago