ಹಿಟ್ ಆಂಡ್ ರನ್ – ಬೈಕ್ ಡಿಕ್ಕಿಯಾಗಿ ಪಾದಚಾರಿ ಸಾವು

ಹಿಟ್ ಆಂಡ್ ರನ್ – ಬೈಕ್ ಡಿಕ್ಕಿಯಾಗಿ ಪಾದಚಾರಿ ಸಾವು

A pedestrian was killed after being hit by a speeding bike in Anandapura, Sagara taluk. The victim, Shekharappa, succumbed to injuries despite treatment. Police have registered a case and are searching for the absconding rider.

ಆನಂದಪುರ: ಸಾಗರ ತಾಲೂಕಿನ ಆನಂದಪುರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪಾದಚಾರಿಯೊಬ್ಬರು ಸಾವನ್ನಪ್ಪಿದ ದುರ್ಘಟನೆ ನಡೆದಿದೆ.

ತೋಳಿಕಲ್ ನಿವಾಸಿ ಶೇಖರಪ್ಪ ಮೃತ ದುರ್ದೈವಿಯಾಗಿದ್ದಾರೆ.

ಆನಂದಪುರದ ಸರ್ಕಾರಿ ಆಸ್ಪತ್ರೆ ಮುಂಭಾಗದ ರಸ್ತೆಯಲ್ಲಿ ಶೇಖರಪ್ಪ ನಡೆದುಕೊಂಡು ಹೋಗುತ್ತಿದ್ದ ವೇಳೆ, ಅತೀ ವೇಗದಲ್ಲಿ ಬಂದ ಅಪರಿಚಿತ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮವಾಗಿ ಶೇಖರಪ್ಪ ಅವರಿಗೆ ಗಂಭೀರ ಗಾಯಗಳಾಗಿ ತೀವ್ರ ರಕ್ತಸ್ರಾವ ಉಂಟಾಗಿದೆ.

ತಕ್ಷಣವೇ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅಪಘಾತದ ಬಳಿಕ ಬೈಕ್ ಸವಾರ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಸವಾರನಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…

4 hours ago

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ – ಆರೋಪಿ ಅರೆಸ್ಟ್!

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…

4 hours ago

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…

5 hours ago

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…

5 hours ago

ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ

ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ Farmers staged a massive protest…

13 hours ago

ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ

ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ India Post GDS…

13 hours ago