ಹುಟ್ಟುಹಬ್ಬದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಆಹಾರ ಸಿಲುಕಿ ಯುವಕ ಸಾವು

ಹುಟ್ಟುಹಬ್ಬದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಆಹಾರ ಸಿಲುಕಿ ಯುವಕ ಸಾವು

A 21-year-old youth died after food got stuck in his throat during a birthday party feast in Chennahalli near Kumsi. Police have registered a case and investigation is underway.

ಕುಂಸಿ: ಸಮೀಪದ ಚೆನ್ನಹಳ್ಳಿ ಗ್ರಾಮದಲ್ಲಿ ನಡೆದ ಹುಟ್ಟುಹಬ್ಬದ ಔತಣ ಕೂಟವೊಂದು ದುರಂತದಲ್ಲಿ ಅಂತ್ಯಗೊಂಡಿದ್ದು, ಯುವಕನೊಬ್ಬ ಗಂಟಲಲ್ಲಿ ಆಹಾರ ಸಿಲುಕಿಕೊಂಡ ಪರಿಣಾಮ ಸಾವನ್ನಪ್ಪಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.

ಮೃತನನ್ನು 21 ವರ್ಷದ ಸಚಿನ್ ಎಂದು ಗುರುತಿಸಲಾಗಿದೆ.

ಗ್ರಾಮದ ನಿವಾಸಿಯೊಬ್ಬರ ಹುಟ್ಟುಹಬ್ಬದ ಪ್ರಯುಕ್ತ ಗ್ರಾಮದ ಹೊರವಲಯದಲ್ಲಿರುವ ನಿರ್ಮಾಣ ಹಂತದ ಮನೆಯ ಬಳಿ ನಾನ್‌ವೆಜ್‌ ಊಟದ ವ್ಯವಸ್ಥೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಊಟದಲ್ಲಿ ಭಾಗವಹಿಸಿದ್ದ ಸಚಿನ್, ಊಟ ಮುಗಿದ ಬಳಿಕ ಪಕ್ಕದಲ್ಲಿದ್ದ ನಿರ್ಮಾಣ ಹಂತದ ಕಟ್ಟಡದೊಳಗೆ ತೆರಳಿದ್ದನು. ನಂತರ ಉಳಿದವರು ತಮ್ಮ ತಮ್ಮ ಮನೆಗಳಿಗೆ ತೆರಳಿದ್ದಾರೆ.

ಶುಕ್ರವಾರ ಬೆಳಿಗ್ಗೆ ಕಾಮಗಾರಿ ಮುಂದುವರಿಸಲು ಬಂದ ಕಾರ್ಮಿಕರು ಸಚಿನ್ ಶವವಾಗಿ ಬಿದ್ದಿರುವುದನ್ನು ಗಮನಿಸಿ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ತಕ್ಷಣ ಕುಟುಂಬದವರು ಶವವನ್ನು ಶಿವಮೊಗ್ಗ ನಗರಕ್ಕೆ ಕೊಂಡೊಯ್ದರು.

ಈ ಕುರಿತು ಮಾಹಿತಿ ಪಡೆದ ಕುಂಸಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದರು. ಮರಣೋತ್ತರ ಪರೀಕ್ಷೆಯಲ್ಲಿ ಸಚಿನ್ ಮದ್ಯಪಾನ ಮಾಡಿದ್ದನು ಮತ್ತು ಗಂಟಲಲ್ಲಿ ಆಹಾರ ಸಿಲುಕಿಕೊಂಡಿರುವುದೇ ಸಾವಿಗೆ ಕಾರಣ ಎಂದು ವೈದ್ಯರು ದೃಢಪಡಿಸಿದ್ದಾರೆ.

ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

7 hours ago

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

14 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

15 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

19 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

23 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

1 day ago