ವಿದ್ಯಾರ್ಥಿಗಳ ಪ್ರವಾಸಿ ಬಸ್ ಅಪಘಾತ: ಶಿವಮೊಗ್ಗ ಮೂಲದ ಇಬ್ಬರ ಸಾವು, ಹಲವರಿಗೆ ಗಾಯ
A tragic accident involving a tourist bus carrying Rambhapuri College students near Trasi in Byndoor, Udupi district, claimed two lives and left several others injured.
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತ್ರಾಸಿ ಸಮೀಪ ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟದ ರಂಭಾಪುರಿ ಕಾಲೇಜು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಪ್ರವಾಸಿ ಬಸ್ ಭೀಕರ ಅಪಘಾತಕ್ಕೀಡಾಗಿದೆ. ಈ ದುರಂತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.
ರಂಭಾಪುರಿ ಕಾಲೇಜಿನ ಬಿಕಾಂ ವಿದ್ಯಾರ್ಥಿಗಳು ಕರಾವಳಿ ಭಾಗಕ್ಕೆ ಪ್ರವಾಸಕ್ಕೆ ತೆರಳಿದ್ದ ವೇಳೆ ಈ ಘಟನೆ ಸಂಭವಿಸಿದೆ. ಮುರುಡೇಶ್ವರದಿಂದ ಉಡುಪಿಯತ್ತ ಬರುತ್ತಿದ್ದ ಬಸ್, ತ್ರಾಸಿ ಬೀಚ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬಸ್ ಭಾರೀ ಹಾನಿಗೊಳಗಾಗಿದೆ.
ಬಸ್‌ನಲ್ಲಿ ಒಟ್ಟು 24 ವಿದ್ಯಾರ್ಥಿಗಳು, 23 ವಿದ್ಯಾರ್ಥಿನಿಯರು ಹಾಗೂ 4 ಮಂದಿ ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರು ಮತ್ತು ಗಾಯಾಳುಗಳು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದವರು ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…
ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…
ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…
ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…
ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…
ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…